ಚಳ್ಳಕೆರೆ:ತಾಲ್ಲೂಕಿನ ಘಟಪರ್ತಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ’ ಎಂದರು.ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಮಂಜು ಬಾಬು ಮಾತನಾಡಿ, ‘ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ತಂದೆ–ತಾಯಿ ಮತ್ತು ಶಿಕ್ಷಕರ ಶ್ರಮವೂ ಇದೆ. ಇಬ್ಬರೂ ಕೈ ಜೋಡಿಸಿದಾಗ ಮಾತ್ರ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಅತಿ ಮುಖ್ಯವಾಗಿದೆ. ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೆಕು’ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಇಸಿಓಗಳಾದ ಲಕ್ಷ್ಮಿಕಾಂತ್ ರೆಡ್ಡಿ ದೇವೇಂದ್ರಪ್ಪ ಸಿಆರ್‌ಪಿಗಳಾದ ಶಿವಣ್ಣ ಎನ್ ಮಲ್ಲೇಶ್ ಸುರೇಶ್ ನಿವೃತ್ತ ಮುಖ್ಯೋಪಾಧ್ಯಾಯ ಮಂಜಪ್ಪ ಮುಖ್ಯ ಶಿಕ್ಷಕ ಬಸವರಾಜ್ ಜಾಕಿರ್ ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.