March 17, 2026
1763470256499.jpg

ಚಿತ್ರದುರ್ಗ ನ.18:
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಎನ್‍ಐಸಿ ಕೇಂದ್ರದಲ್ಲಿ ಮಂಗಳವಾರ ನಶಾಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಮಾದಕ ಪದಾರ್ಥಗಳ ದುರ್ಬಳಕೆ ವಿರುದ್ಧ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ನಶಾಮುಕ್ತ ಭಾರತ ಅಭಿಯಾನದ 05ನೇ ವರ್ಷದ ಸ್ಮರಣೀಯ ರಾಷ್ಟ್ರ ಮಟ್ಟದ ಕಾರ್ಯಕ್ರಮವನ್ನು ಪಂಜಾಬ್ ರಾಜ್ಯದ ಅಮೃತಸರ್‍ನಲ್ಲಿ ಮಂಗಳವಾರ ಏರ್ಪಡಿಸಿದ್ದು, ರಾಷ್ಟ್ರದಾದ್ಯಂತ ಎಲ್ಲಾ ಜಿಲ್ಲಾ ಎನ್.ಐ.ಸಿ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಿತು.

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಅಡಿಯಲ್ಲಿ ನಶಾಮುಕ್ತ ಭಾರತ ಅಭಿಯಾನ ಯೋಜನೆಯನ್ನು ಆಗಸ್ಟ್-2020ರಲ್ಲಿ ಜಾರಿಗೆ ತರಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕದ 06 ಜಿಲ್ಲೆಗಳಲ್ಲಿ 2021-22ನೇ ಸಾಲಿನಲ್ಲಿ ಅನುಷ್ಠಾನ ಮಾಡಲಾಗಿರುತ್ತದೆ. ಉಳಿದ 25 ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ನಶಾಮುಕ್ತ ಭಾರತ ಅಭಿಯಾನ ಯೋಜನೆಯು ಪ್ರಾರಂಭವಾಗಿ 05 ವರ್ಷಗಳು ಪೂರ್ಣಗೊಂಡಿರುವುದರಿಂದ 5ನೇ ವಾರ್ಷಿಕೋತ್ಸವದ ಅಂಗವಾಗಿ ಆಗಸ್ಟ್-01-2025 ರಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. ಘೋಷಣೆಗಳ ಬರವಣಿಗಳು, ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ ಇನ್ನಿತರ ಜಾಗೃತಿ ಕಾರ್ಯಕ್ರಮಗಳನ್ನು ಫ್ರೌಡಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ, ಐ.ಟಿ.ಐ, ನರ್ಸಿಂಗ್ ಕಾಲೇಜುಗಳಲ್ಲಿ, ಸ್ತ್ರೀಶಕ್ತಿ ಗುಂಪುಗಳು ಮುಂತಾದ ಕಡೆ ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನಗಳಿಂದ ದೂರವಿರುವ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಗಿರುತ್ತದೆ. ಇದುವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 778 ವಿವಿಧ ಕಾರ್ಯಕ್ರಮಗಳನ್ನು ಶಾಲಾ-ಕಾಲೇಜುಗಳಲ್ಲಿ ಆಯೋಜನೆ ಮಾಡಿದ್ದು, ನಶಾಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾ ವಿಧಿ ಭೋದಿಸುವ ಮೂಲಕ ಜಾಗೃತಿ ಮೂಡಿಸಲಾಗಿರುತ್ತದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾಹಿತಿ ನೀಡಿದರು.
ಜಿಲ್ಲಾ ಎನ್.ಐ.ಸಿ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸೂಚನಾಧಿಕಾರಿ ಮುಖೇಶ್ ನೆಟ್‍ವರ್ಕ್ ಇಂಜಿನಿಯರ್ಸ್‍ಗಳಾದ ಸಿದ್ದೇಶ್, ಚೇತನ್, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಶಂಕರಪ್ಪ , ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು, ವಿವಿದೋದ್ದೇಶ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.

==========

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading