
ಹಿರಿಯೂರು:
ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯವು ಭರ್ತಿಯಾಗಿ 3ನೇ ಬಾರಿಗೆ ಕೋಡಿ ಬೀಳಲು ಕೇವಲ ಒಂದು ಅಡಿ ಮಾತ್ರ ಬಾಕಿ ಇರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮೊಟ್ಟಮೊದಲ ಬಾರಿಗೆ 1933ರಲ್ಲಿ ಹಾಗೂ 2022ರಲ್ಲಿ ಎರಡನೇ ಬಾರಿಗೆ ಡ್ಯಾಂ ಭರ್ತಿಯಾಗಿ ಕೋಡಿ ಹರಿದಿತ್ತು.
ಭದ್ರಾ ಡ್ಯಾಂ ನಿಂದ ಪ್ರತಿನಿತ್ಯ ಬೆಟ್ಟದ ತಾವರೆಕೆರೆ ಬಳಿಯ ಪಂಪ್ ಹೌಸ್ ನಿಂದ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ ನೀರು ಪಂಪ್ ಮಾಡಲಾಗುತ್ತಿದೆ.
ಮಧ್ಯಾಹ್ನದ ಬಿಸಿಲಿನ ತಾಪಕ್ಕೆ ನೀರು ಆವಿಯಾಗುವುದು ಹಾಗೂ ಮತ್ತಿತರ ಕಾರಣಗಳಿಂದಾಗಿ ಸುಮಾರು 693ಕ್ಯೂಸೆಕ್ ನಷ್ಟು ನೀರು ನಿತ್ಯ ಹರಿದು ಬಂದು ವಾಣಿವಿಲಾಸ ಸಾಗರ ಜಲಾಶಯದ ಒಡಲು ಸೇರುತ್ತಿದ್ದು, ಪ್ರಸ್ತುತ ಜಲಾಶಯದ ನೀರಿನಮಟ್ಟ 129.00 ಅಡಿ ತಲುಪಿದ್ದು ಕೋಡಿ ಬೀಳಲು ಕೇವಲ ಒಂದು ಅಡಿ ಮಾತ್ರ ಬಾಕಿಯಿದೆ. ಪ್ರಸಕ್ತ ಸಾಲಿನಲ್ಲಿಯೇ ಕೋಡಿ ಬೀಳುವ ಸಾಧ್ಯತೆ ಹೆಚ್ಚಾಗಿದೆ.
ವಾಣಿವಿಲಾಸಸಾಗರ ಜಲಾಶಯದ ಒಟ್ಟು ಎತ್ತರ 135 ಅಡಿ ಇದೆ. 130ಅಡಿಗೆ ಡ್ಯಾಂ ಕೋಡಿ ಬೀಳುತ್ತದೆ. ಚಿತ್ರದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ಭಾಗಗಳ ಜನವಸತಿ ಹಾಗೂ ನಗರವಾಸಿಗಳಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲವು ಈ ಜಲಾಶಯವೇ ಆಗಿದೆ. ಈ ಜಲಾಶಯವು ಒಟ್ಟು 12135 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸುತ್ತದೆ.
About The Author
Discover more from JANADHWANI NEWS
Subscribe to get the latest posts sent to your email.