ಚಳ್ಳಕೆರೆ, ಡಿ.18 :
ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ–1986ರ ಅಡಿಯಲ್ಲಿ ಚಚಳ್ಳಕೆರೆ ತಾಲ್ಲೂಕಿನಲ್ಲಿ ಉಪ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.


ಸಭೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚುವುದು, ರಕ್ಷಿಸುವುದು ಹಾಗೂ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ನಿರ್ದೇಶನದಂತೆ ಚಳ್ಳಕೆರೆ ನಗರದಲ್ಲಿನ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಹಠಾತ್ ದಾಳಿ ನಡೆಸಲಾಗಿದ್ದು, ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ವಾಣಿಜ್ಯ ಸಂಸ್ಥೆಗಳ ಮಾಲೀಕರು ಎದುರಿಸಬೇಕಾದ ಕಾನೂನಾತ್ಮಕ ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕಿ ಟಿ. ಕುಸುಮ, ಮಕ್ಕಳ ಸಹಾಯವಾಣಿ ಸಂಯೋಜಕ ಚಂದನ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರೇಖಾ, ಆಶ್ರಿತ ಸಂಸ್ಥೆಯ ಸಿಬ್ಬಂದಿ ದೇವೀರಮ್ಮ ಹಾಗೂ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.