ಚಿತ್ರದುರ್ಗ
2022–23 ಹಾಗೂ 2023–24ನೇ ಸಾಲಿನಲ್ಲಿ ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮಂಜೂರು ಮಾಡಲಾದ ಜಮೀನುಗಳಿಗೆ ಸಂಬಂಧಿಸಿ ಕಾನೂನುಬಾಹಿರವಾಗಿ ಎನ್‌ಒಸಿ ನೀಡಿರುವ ಗಂಭೀರ ಅಕ್ರಮಗಳು ನಡೆದಿರುವ ಆರೋಪಗಳು ಬೆಳಕಿಗೆ ಬಂದಿವೆ. ಈ ಅನ್ಯಾಯದ ವಿರುದ್ಧ ಪಿ. ದ್ಯಾಮಯ್ಯ ಮೈತ್ರಿ ಪತ್ರಿಕೆಯ ಸಂಪಾದಕರು ಹಾಗೂ ಬುದ್ಧ ವೇದಿಕೆ ಅಧ್ಯಕ್ಷರು ಸುಮಾರು ಎರಡುವರೆ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಈ ಹೋರಾಟವು ಸ್ವಾಗತಾರ್ಹವಾಗಿದೆ.
ಈ ಸಂಬಂಧ ರಾಜ್ಯ ಮಟ್ಟದ ಪ್ರಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದರೂ, ಇದುವರೆಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳೂ ಹಾಗೂ ರಾಜ್ಯ ಸರ್ಕಾರವೂ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಇರುವುದು ತೀವ್ರ ಟೀಕೆಗೆ ಗುರಿಯಾಗಿದೆ. ಇದು ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತಾಸಕ್ತಿಗೆ ವಿರುದ್ಧವಾದ ಧೋರಣೆಯೆಂದು ಆರೋಪಿಸಲಾಗಿದೆ.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಲಿ ಶಾಸಕರು ಸಹ ಈ ಗಂಭೀರ ವಿಷಯದಲ್ಲಿ ಪರಿಶಿಷ್ಟ ಜಾತಿ–ಪರಿಶಿಷ್ಟ ವರ್ಗಗಳ ಹಿತಾಸಕ್ತಿಗೆ ಅಗತ್ಯವಾದ ಗಮನಹರಿಸದಿರುವುದು ಪರಿಶಿಷ್ಟ ಸಮುದಾಯಗಳ ವಿರೋಧಿ ನಡೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, 1950ರ ಜನವರಿ 26ರಂದು ಗಣರಾಜ್ಯೋತ್ಸವದ ದಿನದಂದು ಸತ್‌ಸಂಕಲ್ಪ ಸ್ವೀಕರಿಸಿ, ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮನೆಗಳಿಗೆ ಈ ಅನ್ಯಾಯದ ಕುರಿತು ಅರಿವು ಮೂಡಿಸುವ ಆಂದೋಲನವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.
ತಕ್ಷಣವೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪರಿಶಿಷ್ಟ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಬೇಕು ಎಂದು ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.