ರಾಮಜೋಗಿಹಳ್ಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ‘ಚಿಣ್ಣರ ಜೇಂಕಾರ’ ಸಂಭ್ರಮ
ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ‘ಚಿಣ್ಣರ ಜೇಂಕಾರ’ ಕಾರ್ಯಕ್ರಮವನ್ನು ಭಾನುವಾರ ಅದ್ದೂರಿಯಾಗಿ ಆಯೋಜಿಸಲಾಯಿತು. ಶಾಲಾ ಮಕ್ಕಳ ಪ್ರತಿಭೆ ಅನಾವರಣಗೊಂಡ ಈ ಕಾರ್ಯಕ್ರಮದಲ್ಲಿ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ ವಿಷಯಗಳ ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ಸಿದ್ಧಪಡಿಸಿ ಪ್ರದರ್ಶಿಸಿದರು.


ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೌರವಾನ್ವಿತ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ಮಾದರಿಗಳನ್ನು ಮನಸಾರೆ ವೀಕ್ಷಿಸಿ, ಅವರ ಪ್ರತಿಭೆಯನ್ನು ಶ್ಲಾಘಿಸಿ ಪ್ರೋತ್ಸಾಹದ ಮಾತುಗಳನ್ನು ಹೇಳಿದರು. ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಮಾತುಗಳು ಕಾರ್ಯಕ್ರಮದ ಹಿರಿಮೆ ಹೆಚ್ಚಿಸಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಯುವ ಜಾಗೃತಿ ಮತ್ತು ಸೇವಾ ಟ್ರಸ್ಟ್ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಮಮತಾ ಗೌಡ ಮಾತನಾಡಿ, “ನಮ್ಮ ಮಕ್ಕಳಿಗೆ ನಿಮ್ಮ ಉಪಸ್ಥಿತಿಯೇ ದೊಡ್ಡ ಪ್ರೇರಣೆ. ನಿಮ್ಮ ಪ್ರೋತ್ಸಾಹದ ಮಾತುಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿವೆ. ಶಾಲೆಯ ಬೆಳವಣಿಗೆಯಲ್ಲಿ ಗ್ರಾಮಸ್ಥರ ಸಹಕಾರ ಅತ್ಯಂತ ಮುಖ್ಯ. ಇಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಗ್ರಾಮಸ್ಥರಿಗೆ ಶಾಲೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು,” ಎಂದು ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮವು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಹಾಗೂ ಭಾಷಾ ಕೌಶಲ್ಯ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿದೆ. ಕಾರ್ಯಕ್ರಮದ ಅಂತ್ಯದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
About The Author
Discover more from JANADHWANI NEWS
Subscribe to get the latest posts sent to your email.