ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜನರ ವಿಶ್ವಾಸದ ಪ್ರತಿನಿಧಿಯಾಗಿ ದೆಹಲಿಯ ಇಂದಿರಾ ಭವನದಲ್ಲಿ ನಡೆದ ರಾಷ್ಟ್ರೀಯ ಆದಿವಾಸಿ ಸಲಹಾ ಸಮಿತಿಯ ಮಹತ್ವದ ಸಭೆಯಲ್ಲಿ ಭಾಗವಹಿಸಲಾಯಿತು.








ಸಭೆಯಲ್ಲಿ ಆದಿವಾಸಿ ಸಮುದಾಯದ ಸಬಲೀಕರಣ, ಅವರ ಮೂಲಭೂತ ಹಕ್ಕುಗಳ ಸಂರಕ್ಷಣೆ ಹಾಗೂ ಯುವಜನತೆಗೆ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ಕುರಿತು ಗಂಭೀರ ಮತ್ತು ಫಲಪ್ರದ ಚರ್ಚೆಗಳು ನಡೆದವು.
ಈ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಉಪಸ್ಥಿತಿ ಸಭೆಗೆ ವಿಶೇಷ ಚೈತನ್ಯ ನೀಡಿತು. “ಜಲ, ಜಂಗಲ್, ಜಮೀನ್ ಮೇಲೆ ಮೊದಲ ಹಕ್ಕು ಆದಿವಾಸಿಗಳದ್ದೇ” ಎಂಬ ಅವರ ಸಂದೇಶ, ಆದಿವಾಸಿ ಹಕ್ಕುಗಳ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿತು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಲೊಕೊಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.