
ಚಳ್ಳಕೆರೆ ಮೇ.19
ಶಿಕ್ಷಕರು ಸರ್ಕಾರಿ ಶಾಲೆಯತ್ತ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಮುದಾಯವನ್ನು ತೊಡಗಿಸಿಕೊಂಡು ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ದಾಖಲಾತಿ, ಹಾಜರಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.
ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಜಿ.ಟಿ. ಜಿ.ಹೆಚ್.ಎಸ್. ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಜಿತ್ ಫೌಂಡೇಶನ್ ಸಹಬಾಗಿತ್ವದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.







‘ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಕೇವಲ ಶಿಕ್ಷಕರಿಗೆ ಸಿಮೀತವಾಗಿಲ್ಲ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಪಾಲಕರು ಸೇರಿದಂತೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ’ ಎಂದರು.
ಸರಕಾರಿ ಶಾಲೆಗಳ ಪ್ರವೇಶ ಆರಂಭವಾಗಿದ್ದು, ಪ್ರವೇಶಾತಿಯ ಪ್ರಯೋಜನ ಪಡೆಯಲು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು’ ಸರಕಾರಿ ಶಾಲೆಗಳ ಹಾಜರಾತಿ ಹೆಚ್ಚಿಸಲು ಬಿಸಿಯೂಟ.ಉಚಿಪಠ್ಯಪುಸ್ತಕ.ಸಮವಸ್ತ್ರ. ಉಚಿತ ಶಿಕ್ಷಣ.ಹಾಲು.ಶೂ.ಸೇರಿದಂತೆ ವಿವಿಧ ಸೌಕರ್ಯಗಳ ಜತೆಗೆ ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದು ಇವೆಲ್ಲ ಸೌಲಭ್ಯಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡುವ ಮೂಲಕ ಸರಕಾರಿ ಶಾಲೆಗಳ ಹಾಜರಾತಿ ಹೆಚ್ಚಿಸುವಂತೆ ತಿಳಿಸಿದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಜಿ.ಟಿ.ಮಂಜುನಾಥಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು.ಪೋಷಕರು. ಶಿಕ್ಷಣ ಸಂಯೋಜಕರು ಇತರರು ಭಾಗವಹಿಸಿದ್ದರು.







About The Author
Discover more from JANADHWANI NEWS
Subscribe to get the latest posts sent to your email.