
ಚಳ್ಳಕೆರೆ: ಡೆಂಗ್ಯೂ-ಚಿಕೂನ್ ಗುನ್ಯಾಕ್ಕೆ ಯಾವುದೇ ಚಿಕಿತ್ಸೆ ಅಥವಾ ಲಸಿಕೆಯಾಗಲಿ ಪ್ರಸ್ತುತ ಲಭ್ಯವಿಲ್ಲ ಆದರೂ, ಜನರೂ ಭಯಪಡುವ ಅವಶ್ಯಕತೆ ಇಲ್ಲ ಏಕೆಂದರೆ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು,ಈ ರೋಗ ನಿಯಂತ್ರಣಕ್ಕೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮುಸ್ಟಲಗುಮ್ಮಿ ಆರೋಗ್ಯ ನಿರೀಕ್ಷಣಾ ಅಧಿಕಾರಿ ಅಶೋಕ್ ಹೇಳಿದರು.
ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಮುಷ್ಪಲಗುಮ್ಮಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ಚಿತ್ರದುರ್ಗ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಚಳ್ಳಕೆರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಷ್ಪಲಗುಮ್ಮಿಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಡೆಂಗೀ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು
ಮಳೆಗಾಲದ ಪ್ರಾರಂಭದಲ್ಲಿ ಸೊಳ್ಳೆಗಳಿಂದ ಮಲೇರಿಯಾ, ಡೆಂಗೆ ಹಾಗೂ ಚಿಕೂನ್ ಗುನ್ಯಾ ರೋಗಗಳು ಹೆಚ್ಚುವ ಸಂಭವವಿದೆ. ಡೆಂಗ್ಯೂ ಒಂದು ವೈರಸ್‌ನಿಂದ ಬರುವ ರೋಗವಾಗಿದ್ದು, ಈಡಿಸ್ ಈಜಿಪ್ಟ್ ಎಂಬ ಹೆಣ್ಣು ಸೊಳ್ಳೆಯಿಂದ ಹರಡುತ್ತದೆ. ಈ ಸೊಳ್ಳೆ ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ ಯಾಗಿದ್ದು, ತೀವ್ರ ಜ್ವರ, ಅತಿಯಾದ ತಲೆನೋವು, ಕಣ್ಣು ಗುಡ್ಡೆಗಳ ಹಿಂಭಾಗ ನೋವು, ವಾಂತಿ ಹಾಗೂ ವಾಕರಿಕೆ, ಮಾಂಸ ಖಂಡಗಳ ನೋವು ಈ ರೋಗದ ಲಕ್ಷಣಗಳಾಗಿವೆ ಪ್ರತಿ ಮನೆಗಳಲ್ಲಿ ನೀರು ಸಂಗ್ರಹಿಸುವ ಒಳಾಂಗಣ ಮತ್ತು ಹೊರಾಂಗಣ ನೀರಿನ ತಾಣಗಳಾದ ಸಿಮೆಂಟ್ ತೊಟ್ಟಿ ಬ್ಯಾರಲ್, ಡ್ರಂ, ಮಣ್ಣಿನ ಮಡಕೆಗಳು ಮುಂತಾದವುಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಿ ಒಣಗಿಸಿ ನಂತರ ನೀರು ಸಂಗ್ರಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂಜಾಗ್ರತೆ ಕ್ರಮ ವಹಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳಾದ ಚೇತನ, ಗೌರಮ್ಮ, ಜ್ಯೋತಿ,ಸಮುದಾಯ ಆರೋಗ್ಯ ಅಧಿಕಾರಿ ನಯನ,ಗೀತಾ,ಅಸ್ಪತ್ರೆ ಸಿಬ್ಬಂದಿ,ಆಶಾ ಕಾರ್ಯ ಕರ್ತೆಯಾರು ಸಾರ್ವಜನಿಕರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.