ಚಳ್ಳಕೆರೆ: ಖಾಸಗಿ ಶಾಲೆಗಳು ವಿಧಿಸುವ ಶುಲ್ಕದ ವಿವರವನ್ನು ಶಾಲೆಯ ನಾಮಫಲಕ ಅಥವಾ ನೋಟಿಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಆಗ್ರಹಿಸಿದೆ.



ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪದಾಧಿಕಾರಿಗಳು, ಚಳ್ಳಕೆರೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವರ್ಷದಿಂದ ವರ್ಷಕ್ಕೆ ಖಾಸಗಿ ಶಾಲೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಎಲ್‌ಕೆಜಿ, ಯುಕೆಜಿ ಇಂದ 1ರಿಂದ 10ನೇ ತರಗತಿವರೆಗಿನ ಶಾಲಾ ಶುಲ್ಕವನ್ನು ಪೋಷಕರಿಗೆ ಸ್ಪಷ್ಟವಾಗಿ ತಿಳಿಸುವ ವ್ಯವಸ್ಥೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಆದರೆ ಹಲವು ಶಾಲೆಗಳು ನಿಗದಿಪಡಿಸಿರುವ ಶುಲ್ಕದ ಮಾಹಿತಿಯನ್ನು ನಾಮಫಲಕ ಅಥವಾ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸುತ್ತಿಲ್ಲ. ಇದರಿಂದ ಪೋಷಕರು ಗೊಂದಲಕ್ಕೀಡಾಗುತ್ತಿದ್ದಾರೆ ಎಂದು ದೂರಲಾಗಿದೆ.
ಆದ್ದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ಖಾಸಗಿ ಶಾಲೆಗಳು ತಮ್ಮ ಶುಲ್ಕ ವಿವರವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ನಿರ್ದೇಶನ ನೀಡಬೇಕು ಎಂದು ಕರವೇ ಒತ್ತಾಯಿಸಿದೆ.
ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಈ ಮನವಿಗೆ ತಾಲ್ಲೂಕು ಅಧ್ಯಕ್ಷ ಪಿ. ಮಂಜುನಾಥ ನೇತೃತ್ವ ವಹಿಸಿದ್ದು, ಗೌರವ ಅಧ್ಯಕ್ಷ ಸಿ. ಬೋಜರಾಜ್, ಪ್ರಧಾನ ಕಾರ್ಯದರ್ಶಿ ಪಿ. ಗಿರೀಶ್, ಯುವ ಘಟಕ ಅಧ್ಯಕ್ಷ ಮೋದಿನ್, ಕಾರ್ಮಿಕ ಘಟಕ ಅಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಶೇಖರ್ ಸೇರಿದಂತೆ ತಿಪ್ಪೇಸ್ವಾಮಿ, ದಾದು ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.