ವಿಠಲಕಟ್ಟೆ ಗ್ರಾಮದಲ್ಲಿ ಬಿಎಂಎಫ್‌ಟಿ ಅನುದಾನದಡಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ
ಚಳ್ಳಕೆರೆ ತಾಲ್ಲೂಕಿನ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲಕಟ್ಟೆ ಗ್ರಾಮದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿ ಬಿಎಂಎಫ್‌ಟಿ (BMFT) ನಿಯಮದಡಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇಂದು ಚಾಲನೆ ನೀಡಲಾಯಿತು.
ಗ್ರಾಮದ ಸಾರ್ವಜನಿಕರ ಸಮ್ಮುಖದಲ್ಲಿ ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಘಟಕವನ್ನು ಅಧಿಕೃತವಾಗಿ ಚಾಲನೆ ನೀಡಿದರು. ಈ ಘಟಕದ ಮೂಲಕ ಗ್ರಾಮಸ್ಥರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಲಭ್ಯವಾಗಲಿದ್ದು, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.








About The Author
Discover more from JANADHWANI NEWS
Subscribe to get the latest posts sent to your email.