ಚಿತ್ರದುರ್ಗ ಸೆ.19:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್‍ಗಳಿಗೆ 0.25 ಟಿ.ಎಂ.ಸಿ ಪ್ರಮಾಣದ ನೀರನ್ನು ಸಂಗ್ರಹಿಸಲು ವಾಣಿವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಇದೇ ಸೆಪ್ಟೆಂಬರ್ 19 ರಿಂದ ನೀರನ್ನು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಸಾರ್ವಜನಿಕರಿಗೆ ವಿಶ್ವೇಶ್ವರಯ್ಯ ಜಲ ನಿಗಮ ಮುನ್ನೆಚ್ಚರಿಕೆ ಸೂಚನೆ ನೀಡಿದೆ.
ಪ್ರಾದೇಶಿಕ ಆಯುಕ್ತರು ಹಾಗೂ ಕಂದಾಯ ಇಲಾಖೆ ಆಯುಕ್ತರ ಆದೇಶದಂತೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ನದಿ, ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ಹಳ್ಳಗಳ ಪಾತ್ರಗಳಲ್ಲಿ ಜನರು ಸಂಚರಿಸುವುದು, ಈಜಾಡುವುದು ಮತ್ತು ಜಾನುವಾರುಗಳನ್ನು ನದಿ ಒಳಗೆ ಬಿಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೂಚನೆಗಳನ್ನು ಉಲ್ಲಂಘಿಸುವುದು, ಸರ್ಕಾರದ ಆಸ್ತಿಯಾದ ಕಟ್ಟಡಗಳನ್ನು ಹಾನಿಗೊಳಿಸುವುದು ಹಾಗೂ ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯಡಿ ಕಾನೂನು ಬಾಹಿರವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.