ವರದಿ: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.ನಾಯಕನಹಟ್ಟಿ:: ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರದ ನೂತನ ಭೋವಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ-ಒಳಮಠ ಮತ್ತು ಹೊರಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದದಿಂದ ಕರ್ನಾಟಕ ರಾಜ್ಯ ಸರ್ಕಾರ ನೂತನವಾಗಿ ಭೋವಿ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ ನನ್ನ ಅಧಿಕಾರ ಅವಧಿಯಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಡ ಕಡೆಯ ವ್ಯಕ್ತಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.




ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಭುಸ್ವಾಮಿ, ಜಿ . ಎಸ್. ತಿಪ್ಪೇಸ್ವಾಮಿ, ವಕೀಲರಾದ ಉಮಾಪತಿ, ಶಿಕ್ಷಕ ಕೆ.ಓ. ರಾಜಯ್ಯ, ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಮನ್ಸೂರ್, ವಾಸಿಂ, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶ್ರೀಕಾಂತ್, ಎನ್, ದೇವರಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಡಾ.
ಕಾಟಂಲಿಂಗಯ್ಯ, ದೇವಸ್ಥಾನ ಸಿಬ್ಬಂದಿ ಎಸ್ ಸತೀಶ್, ಇದ್ದರು
About The Author
Discover more from JANADHWANI NEWS
Subscribe to get the latest posts sent to your email.