ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ಪಟ್ಟಣದಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆಯಾಗಿದ್ದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಇದನ್ನು ಸರಿಪಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕೆಂದು ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳದ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಸಿಂಹ ಶಿವುಗೌಡ ಭಾರತೀಯ ಆಗ್ರಹಿಸಿದರು.

ಅವರು ಸಾಲಿಗ್ರಾಮ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಆರೇಳು ದಿನಗಳಿಂದ ಸಾಲಿಗ್ರಾಮ ಪಟ್ಟಣದಲ್ಲಿ ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ. ಇಷ್ಟಾದರೂ ಕುಡಿಯುವ ನೀರಿನ ಸಮಸ್ಯೆಯನ್ನು ಇದುವರೆಗೂ ಬಗೆಹರಿಸದೆ ಇರುವುದರಿಂದ ಜನಸಾಮಾನ್ಯರು ನೀರಿಗಾಗಿ ಸಂಕಟ ಪಡುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ದೀಪಾವಳಿ ಹಬ್ಬವು ಇದ್ದು ಇದು ಪಟ್ಟಣದಲ್ಲಿ ಅತ್ಯಂತ ದೊಡ್ಡ ಹಬ್ಬವಾಗಿದೆ. ಇಂತಹ ಸಂದರ್ಭದಲ್ಲಿಯೂ ಕುಡಿಯುವ ನೀರಿಗಾಗಿ ಜನರು ಪರದಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಮೈಸೂರು ಜಿಲ್ಲೆಯ ನೂತನ ತಾಲೂಕು ಕೇಂದ್ರ ಹಾಗೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಸಾಲಿಗ್ರಾಮ ಪಟ್ಟಣದಲ್ಲಿಯೇ ಇಂತಹ ಪರಿಸ್ಥಿತಿ ಕುಡಿಯುವ ನೀರಿಗೆ ಬಂದರೆ ಬೇರೆ ಕಡೆ ಹೇಗೆ ಎಂದು ಪ್ರಶ್ನಿಸಿದರು.
ಸಾರ್ವಜನಿಕರು ಕುಡಿಯಲು ನೀರಿಲ್ಲದೆ ನೀರಿಗಾಗಿ ಹುಡುಕಾಟ ಮಾಡುತ್ತಿದ್ದರು ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸದೆ ನಿರ್ಲಕ್ಷ ಭಾವನೆ ತೋರಿಸುತ್ತಾ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಕೊಡದೆ ತೊಂದರೆ ನೀಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದರು.
ಎಂತಹ ಸಂದರ್ಭದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಸರ್ಕಾರವು ಅದಕ್ಕಾಗಿ ಹಣವನ್ನು ಮೀಸಲಿಟ್ಟಿರುತ್ತದೆ. ಹಾಗಿದ್ದರೂ ತಾಲೂಕು ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ತೊಂದರೆಯಾಗಿದೆ.
ಕ್ಷೇತ್ರದ ಶಾಸಕರು, ಸಂಬಂಧಪಟ್ಟ ಇಲಾಖೆಯವರು, ಸ್ಥಳೀಯ ಆಡಳಿತ ವ್ಯವಸ್ಥೆಯು ತಕ್ಷಣವೇ ಸಾಲಿಗ್ರಾಮ ಪಟ್ಟಣದ ನೀರಿನ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಟ್ಟಣದ 7ನೇ ವಾರ್ಡಿನ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ ಅವರು ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ತಮ್ಮ ವಾರ್ಡಿನ ಜನರಿಗೆ ತಮ್ಮ ಸ್ವಂತ ಹಣವನ್ನು ವ್ಯಹಿಸಿ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ ಇವರ ಸೇವಾ ಕಾರ್ಯ ನಿಜಕ್ಕೂ ಇತರೆರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಇತರ ಜನಪ್ರತಿನಿಧಿಗಳು ಕೂಡ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಮೂಲಕ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಎಂದು ಮನವಿ ಮಾಡಿದ ಅವರು ಸಂಬಂಧಪಟ್ಟ ಇಲಾಖೆಯವರು ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡದಿದ್ದರೆ ಸಂಘಟನೆ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್, ವಾಹನ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್, ಸಂಘಟನೆಯ ಕೆ.ಆರ್.ನಗರ ತಾಲ್ಲೂಕು ಅಧ್ಯಕ್ಷ ಬೋರಪ್ಪಶೆಟ್ಟಿ, ಉಪಾಧ್ಯಕ್ಷ ಸ್ವಾಮೀನಾಯಕ, ಮುಖಂಡ ಮಂಜು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.