March 16, 2026
n6397624811731978333545681c31e8c63a3253c79623ce6d987a5c6e509891052b1bb8575f6ddbbfe840e2.jpg

ಚಿತ್ರದುರ್ಗ, ನವೆಂಬರ್ 18: ಖಾಸಗಿ ಗಾರ್ಮೆಂಟ್ಸ್ನಲ್ಲಿ  ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಸಿಪಿಐ ಗುಡ್ಡಪ್ಪ ಮತ್ತು ವೆಂಕಟೇಶ್ ಅವರು ಸೋಮವಾರ ನಗರದಲ್ಲಿ ಗಾರ್ಮೆಂಟ್ಸ್ಗಳ ಮೇಲೆ ದಾಳಿ ಮಾಡಿದರು. ಈ ವೇಳೆ ಒಟ್ಟು 15 ಮಂದಿ ಶಂಕಿತ ಬಾಂಗ್ಲಾ ನುಸುಳುಕೋರರು ಪೊಲೀಸರು ವಶಕ್ಕೆ ಪಡೆದವರು. ಇವರಲ್ಲಿ ಶೇಕ್ ಶೈಪುರ್ ರೆಹಮಾನ್, ಸುಮನ್ ಹುಸೇನ್ ಎಂಬವರು ಬಾಂಗ್ಲಾದೇಶದಿಂದ ಅಕ್ರಮವಾಗಿ ದೇಶದೊಳಗೆ ನುಸಳಿರುವುದು ಪಕ್ಕಾ ಆಗಿದೆ.

ವಶಕ್ಕೆ ಪಡೆದವರನ್ನು ಪೊಲೀಸರು ಚಿತ್ರದುರ್ಗದ ಕೋಟೆ, ಗ್ರಾಮಾಂತರ ಠಾಣೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಬಹುತೇಕರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್​ಗಳು ಪತ್ತೆಯಾಗಿವೆ.

ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿಗರು ಪೊಲೀಸರ​ ಅತಿಥಿ

ಕರ್ನಾಟಕದ ಪೊಲೀಸರು ಕಳೆದ ಹಲವು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ನಾಡಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲಸಿದ್ದ ನಾಲ್ವರು ಬಾಂಗ್ಲಾದೇಶ ಪ್ರಜೆಗಳನ್ನು ಇದೇ ವರ್ಷ ಎಪ್ರಿಲ್​ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇವರ ಬಳಿ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಪತ್ತೆಯಾಗಿದ್ದವು.

ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಅಕ್ಟೋಬರ್​ ತಿಂಗಳಲ್ಲಿ ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಒಂಬತ್ತು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಬಾಂಗ್ಲಾದೇಶಿಗರು ಮೀನುಗಾರಿಕಾ ಕಾರ್ಮಿಕರಾಗಿ ಉಡುಪಿಯ ಮಲ್ಪೆಯಲ್ಲಿ ನೆಲೆಸಿದ್ದರು. ಈ ಒಂಬತ್ತು ಮಂದಿ ಬಳಿ ನಕಲಿ ಭಾರತೀಯ ದಾಖಲೆಗಳು ಪತ್ತೆಯಾಗಿದ್ದವು. ಇಲ್ಲಿಯವರೆಗೆ ಇದು ಅತಿದೊಡ್ಡ ಕಾರ್ಯಾಚರಣೆಯಾಗಿತ್ತು.

ಇನ್ನು, ಶಿವಮೊಗ್ಗದ ಜಯನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಏಳು ಮಂದಿ ಬಾಂಗ್ಲಾದೇಶಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಏಳು ಜನರ ಬಳಿ ಮಂಗಳೂರು ವಿಳಾಸದ ಗುರುತಿನ ಚೀಟಿಗಳು ಪತ್ತೆಯಾಗಿದ್ದವು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading