March 18, 2026
IMG-20241119-WA0234.jpg

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ತಾಯಿ ಹಾಗೂ ಮಗಳು ಇಬ್ಬರು ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಮನೆಯಲ್ಲಿ ನೇಣಿಗೆ ಶರಣಾದ ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತ ದುರ್ದೈವಿಗಳು. ವಾರದ ಹಿಂದೆಯೇ ತಾಯಿ ಹಾಗೂ ಮಗಳು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಿತಿಯಲ್ಲಿ ನೇಣುಬಿಗಿದ ರೀತಿಯಲ್ಲಿ ಶವ ಗಳು ಪತ್ತೆಯಾಗಿದೆ.

ಪತಿ ಸಾವಿನ ಬಳಿಕ ಗೀತಾ ತೀವ್ರ ಖಿನ್ನತೆಗೆ ಒಳಗಾಗಿದ್ದರು. 6 ತಿಂಗಳ ಹಿಂದೆಯೇ ಗೀತಾ ಪತಿ ಬಸವರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿ ಸಾವಿನಿಂದ ತಾಯಿ ಮಗಳು ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಪಿಎಸ್ ಐ ನೇತ್ರಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading