ರಾಯಚೂರು, ಡಿ.19:
ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ವತಿಯಿಂದ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಡಿ.20 ಮತ್ತು 21ರಂದು ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷರಾದ ಡಾ. ಅರ್ಜುನ್ ಗೊಳಸಂಗಿ ತಿಳಿಸಿದ್ದಾರೆ.ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಶ್ರೀಮತಿ ಜಯದೇವಿ ಗಾಯಕವಾಡ ವಹಿಸಲಿದ್ದು, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ದಲಿತ ಸಾಹಿತ್ಯ ಪರಿಷತ್ ಬೆಂಗಳೂರು ವಿಭಾಗೀಯ ಸಂಯೋಜಕರಾದ ಶ್ರೀ ಗಣಪತಿ ಗೋ. ಛಲವಾದಿ ಮಾಹಿತಿ ನೀಡಿದ್ದಾರೆ.ಸಮ್ಮೇಳನದಲ್ಲಿ ಸಾಹಿತ್ಯ ವಿಚಾರಗೋಷ್ಠಿಗಳು, ಮಹಿಳಾ ಕಾವ್ಯಯಾನ, ಪುರುಷ ಕಾವ್ಯಯಾನ, ಜನಪದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ರಾಷ್ಟ್ರೀಯ ಗೌರವ ಪ್ರಶಸ್ತಿ, ರಾಷ್ಟ್ರೀಯ ಯುವ ಪ್ರಶಸ್ತಿ, ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಹಾಗೂ ಬಾಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.ಡಿ.21ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಸಮಾರೋಪ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಬೀದರ್ ಬೌದ್ಧ ವಿಹಾರದ ವರಜ್ಯೋತಿ ಬಂತೇಜಿ ಅವರು ನೇತೃತ್ವ ವಹಿಸಲಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲದೆ ದೇಶದ ವಿವಿಧ ಭಾಗಗಳಿಂದ ಕವಿಗಳು, ಸಾಹಿತಿಗಳು, ಲೇಖಕರು, ಯುವ ಬರಹಗಾರರು, ಕವಯಿತ್ರಿಯರು, ದಲಿತ ಸಂಘಟನೆಗಳ ನಾಯಕರು ಹಾಗೂ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಈ ಸಮ್ಮೇಳನಕ್ಕೆ ಚಿತ್ರದುರ್ಗ ಜಿಲ್ಲೆಯ ಆಸಕ್ತ ಸಾಹಿತಿಗಳು, ಕವಿಗಳು, ಯುವ ಬರಹಗಾರರು, ಸಾಹಿತ್ಯಾಸಕ್ತರು ಹಾಗೂ ಲೇಖಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಎಂ. ಗುರುನಾಥ್ ಹಾಗೂ ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಕೋಡಿಹಳ್ಳಿ ಟಿ. ಶಿವಮೂರ್ತಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.