ಚಿತ್ರದುರ್ಗ.ಜ.20:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಸಿ.ಮಹೇಶ್ ಅವರು ಈಚೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ, ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ಹಾಗೂ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ಘಟಕಾಂಶಗಳ ಪ್ರಗತಿ ಪರಿಶೀಲನೆ ನಡೆಸಿದರು.
ಮೊಳಕಾಲ್ಮುರು ತಾಲ್ಲೂಕಿನ ಕೆರೆಕೊಂಡಾಪುರ ಗ್ರಾಮದಲ್ಲಿ ಸ್ವಚ್ಛ ಸಂಕೀರ್ಣ ಘಟಕದಲ್ಲಿ ಘನ ತ್ಯಾಜ್ಯ ನಿರ್ವಹಣೆ ಹಾಗೂ ಕಾರ್ಯಚರಣೆ ಬಗ್ಗೆ ಪರಿಶೀಲಿಸಿದರು. ನಂತರ ಮಲ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಳ ಪರಿಶೀಲನೆ ಹಾಗೂ ಹಾನಗಲ್ ಗ್ರಾಮದಲ್ಲಿ ಬೂದು ನೀರು ನಿರ್ವಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ವಿವಿಧ ಘಟಕಾಂಶಗಳ ಕುರಿತು ಸಭೆ ನಡೆಸಿ ಹಾಗೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸುವಂತೆ ಸೂಚನೆ ನೀಡಿದರು.
ಚಳ್ಳಕೆರೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ವಿವಿಧ ಘಟಕಾಂಶಗಳ ಕುರಿತು ಸಭೆ ನಡೆಸಿ ಹಾಗೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿ ಪಡಿಸಿ ಪೂರ್ಣಗೊಳಿಸಲು ಸೂಚನೆ ನೀಡಿದರು. ನಂತರ ನಗರಂಗೆರೆ ಗ್ರಾಮ ಪಂಚಾಯಿತಿಯ ಶಾಲಾ ಸಮುದಾಯ ಶೌಚಾಲಯ, ಹಳೆಯ ಸ್ವಚ್ಛ ಸಂಕೀರ್ಣ ಘಟಕ, ಹೊಸ ಸ್ವಚ್ಛ ಸಂಕೀರ್ಣ ಘಟಕ ಮತ್ತುಮಲ ತ್ಯಾಜ್ಯ ಸಂಸ್ಕರಣ ಘಟಕ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.
ಹಿರಿಯೂರು ತಾಲ್ಲೂಕಿನ ವಿವಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿ ಪುರ ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಛ ಸಂಕೀರ್ಣ ಘಟಕ ಹಾಗೂ ಮಲ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆ ಮತ್ತು ಕಾರ್ಯಚರಣೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಎನ್ ಗಾಯಿತ್ರಿ, ಸಹಾಯಕ ಯೋಜನಾಧಿಕಾರಿ ಡಿ.ಎಸ್.ಸುಮಾ, ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹನಮಂತಪ್ಪ, ಚಳ್ಳಕೆರೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹರೀಶ್ ಚಂದ್, ಹುಸೇನ್ ಭಾಷಾ, ದಯಾನಂದ ಸ್ವಾಮಿ, ಕಿರಿಯ ಅಭಿಯಂತರರಾದ ತಿಪ್ಪೆಸ್ವಾಮಿ, ಮಲ್ಲಿಕಾರ್ಜುನ, ಸಹಾಯಕ ನಿರ್ದೇಶರಕರಾದ ಯಶವಂತ್, ಗಣೇಶ್, ರೇಖಾ, ಸಪೋರ್ಟ್ ಇಂಜಿನಿಯರ್ಸ್ ಯತೀಶ್, ಪ್ರಜ್ವಲ್, ಆಕಾಶ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರಾದ ಬಿ.ಸಿ ನಾಗರಾಜು, ವಿನಯ್ ಕುಮಾರ್, ಪ್ರಮೀಳ, ಶಶಿಧರ್ ಇದ್ದರು.




About The Author
Discover more from JANADHWANI NEWS
Subscribe to get the latest posts sent to your email.