ಹಿರಿಯೂರು :
ಇದೇ ಜನವರಿ 23ರ ಗುರುವಾರದಂದು ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವರಾದಂತ ಡಿ ಸುಧಾಕರ್ ರವರ ನೇತೃತ್ವದಲ್ಲಿ ವಿವಿ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದಂತ ಸನ್ಮಾನ್ಯ ಡಿ.ಕೆ.ಶಿವಕುಮಾರ್ ರವರು ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ವಾಣಿವಿಲಾಸ ಸಾಗರ ಜಲಾಶಯದ ಸುತ್ತಮುತ್ತ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿಗಳಾದಂತ ವೆಂಕಟೇಶ್ ರವರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಂತ ಖಾದಿ ಜಿ.ರಮೇಶ್, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷರಾದ ಕಂದಿಕೆರೆ ಸುರೇಶ್ ಬಾಬು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಾಗೇಂದ್ರ ನಾಯ್ಕ, ಸ್ಥಳೀಯ ಮುಖಂಡರಾದ ಮೂರ್ತಿ, ನಾಗರಾಜ್, ಶಮ್ಮು, ಫಕ್ರುದ್ದೀನ್ ತರಕಾರಿ ಆಯುಬ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.