January 29, 2026
IMG-20250120-WA0181.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಮೈಸೂರು: ಸಮಾಜದ ಹೆಸರಿನಲ್ಲಿ ಸ್ಥಾಪನೆಯಾಗುವ ಸಂಘ ಸಂಸ್ಥೆಗಳು ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಹೆಚ್.ಎನ್.ವಿಜಯ್ ಅವರು ಹೇಳಿದರು.

ಅವರು ಮೈಸೂರು ನಗರದ ಗೋವರ್ಧನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಶ್ರೀ ಭಗೀರಥ ಉಪ್ಪಾರ ಸೇವಾ ಸಂಘದ ಉದ್ಘಾಟನೆ ಹಾಗೂ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘಟನೆಗಳು ಯಾವಾಗಲೂ ಕೂಡ ನಿಂತ ನೀರಾಗದೆ ಸದಾ ಸಕ್ರಿಯವಾಗಿದ್ದುಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವವರು ತಾವು ಸಮಾಜಕ್ಕಾಗಿ ಮಾಡುವ ಉತ್ತಮ ಕಾರ್ಯಗಳಿಂದ ಗುರುತಿಸಿಕೊಳ್ಳುವಂತಾಗಬೇಕು. ಇಂಥ ಸಂದರ್ಭದಲ್ಲಿ ಸಮುದಾಯವೇ ನಿಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದರು.

ಸಂಘಟನೆಗಳು ಎಷ್ಟಾದರೂ ಇರಲಿ ಅವುಗಳು ಮಾಡುವ ಕಾರ್ಯಗಳ ಮೇಲೆ ಸಮಾಜದವರು ಸಂಘಟನೆಗಳನ್ನು ಬೆಂಬಲಿಸುತ್ತಾರೆ. ಆದರೆ ಸಮಾಜದ ವಿಚಾರಗಳು ಬಂದಾಗ ಎಲ್ಲಾ ಸಂಘಟನೆಗಳು ಒಂದೇ ವೇದಿಕೆಗೆ ಬಂದು ಸಮಾಜದ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದರು.

ಸರ್ಕಾರವು ಇದುವರೆಗೂ ಕೂಡ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ, ಬೇರೆ ಬೇರೆ ನಿಗಮಗಳಿಗೆ ನೂರಾರು ಕೋಟಿ ಅನುದಾನವನ್ನು ನೀಡಿದರೆ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಕೇವಲ 5 ಕೋಟಿ ರೂ ನೀಡುತ್ತಾರೆ. ಇದರಿಂದ ಸಮುದಾಯವನ್ನು ಆರ್ಥಿಕವಾಗಿ ಮೇಲೆತ್ತಲು ಸಾಧ್ಯವಾ ಎಂದು ಪ್ರಶ್ನಿಸಿದರು.

ಸಂಘವು ಮಾಡುವ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಸದಾ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.

ಸಂಘವು ಹೊರ ತಂದಿರುವ ನೂತನ ವರ್ಷದ ಕ್ಯಾಲೆಂಡರ್ ಅನ್ನು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮಧುವನಹಳ್ಳಿ ಶಿವಕುಮಾರ್ ಅವರು ಬಿಡುಗಡೆ ಮಾಡಿದರು.

ವಾಹನಗಳಿಗೆ ಅಳವಡಿಸುವ ಸ್ಟಿಕ್ಕರ್ ಗಳನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿರವರು ಬಿಡುಗಡೆ ಮಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಯ್ಯನ ಸರಗೂರು ಮಠದ ಶ್ರೀ ಮಹದೇವ ಸ್ವಾಮಿಗಳು ವಹಿಸಿದ್ದರು.

ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆಯನ್ನು ಮಾಡಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಚಾಮರಾಜನಗರ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಜೆ.ಯೋಗೇಶ್, ಮೈಸೂರು ಮಹಾನಗರ ಪಾಲಿಕೆ ಮಾಜಿ ಉಪಮೇಯರ್
ಡಾ.ಜಿ.ರೂಪ, ಹಿಂದುಳಿದ ವರ್ಗಗಳ ಒಕ್ಕೂಟದ ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾದ ಮಂಗಲ ಶಿವಕುಮಾರ್, ಅಂತರಾಷ್ಟ್ರೀಯ ಕ್ರೀಡಾಪಟುಗಳಾದ
ಸಿ.ಚಾಮಶೆಟ್ಟಿ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ
ಪ್ರೊ.ಎ.ನಾಗರಾಜು ವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಸಂಘದ ಕಾರ್ಯದರ್ಶಿ ನಂಜುಂಡಸ್ವಾಮಿ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ವಿವಿಧ ಭಾಗಗಳ ಜನಪ್ರತಿನಿಧಿಗಳು, ಮುಖಂಡರುಗಳು, ಸಂಘ ಸಂಸ್ಥೆಯವರು, ಸಂಘದ ಪದಾಧಿಕಾರಿಗಳು ಸೇರಿದಂತೆ ಉಪ್ಪಾರ ಬಂಧುಗಳು ಪಾಲ್ಗೊಂಡಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading