ಚಳ್ಳಕೆರೆ ಜ.,20.ಬ್ಯಾಂಕ್ ಆಫ್ ಇಂಡಿಯಾ ಚಳ್ಳಕೆರೆ ಶಾಖೆ 100 ಕೋಟಿ ರೂ.ಗಿಂತ ಅಧಿಕ ವ್ಯವಹಾರ ಸಾಧಿಸಿದ ಹಿನ್ನೆಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಬಾಲೆನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಹುಬ್ಬಳ್ಳಿ–ಧಾರವಾಡ ಜೋನಲ್ ಮ್ಯಾನೇಜರ್ ಶ್ರೀ ತರಣಿ ಚರಣ್ ಸಾಹು ಅವರು ಭಾಗವಹಿಸಿ ಮಾತನಾಡಿ, ಬ್ಯಾಂಕ್‌ನ ಯಶಸ್ಸಿಗೆ ಗ್ರಾಹಕರ ಸಹಕಾರವೇ ಪ್ರಮುಖ ಕಾರಣವಾಗಿದ್ದು, ಅದಕ್ಕೆ ಪ್ರತಿಯಾಗಿ ಶಿಕ್ಷಣ ಕ್ಷೇತ್ರಕ್ಕೆ ಬೆಂಬಲ ನೀಡುವುದು ನಮ್ಮ ಕರ್ತವ್ಯ ಎಂದರು.
ಚಳ್ಳಕೆರೆ ಶಾಖಾ ಮ್ಯಾನೇಜರ್ ಜಿ.ಎಸ್. ಸುಭಾಷ್ ಮಾತನಾಡಿ, ಮುಂದಿನ ದಿನಗಳಲ್ಲಿಯೂ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳಿಗೆ ಬ್ಯಾಂಕ್ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ಯಾಂಕ್ ಸಿಬ್ಬಂದಿ ವರ್ಗ, ಬಾಳೆನಹಳ್ಳಿ ಗ್ರಾಮದ ಮುಖ್ಯಸ್ಥರು, ಶಾಲೆಯ ಶಿಕ್ಷಕ ವೃಂದ, ಅತಿಥಿಗಳಾಗಿ ಜೆ. ರಘುವೀರ ನಾಯಕ, ಮಂಜುನಾಥ್, ಎಲ್.ಐ.ಸಿ ಪ್ರಕಾಶ್ ಹಾಗೂ ರೈತ ಮುಖಂಡ ಆದ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಗೆ ಅಗತ್ಯವಾದ ಸಾಮಗ್ರಿಗಳನ್ನು ಪಡೆದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
About The Author
Discover more from JANADHWANI NEWS
Subscribe to get the latest posts sent to your email.