ಚಿತ್ರದುರ್ಗಫೆ.20:
ಭರಮಸಾಗರ ಗ್ರಾಮದ ಡಿ.ವಿ.ಎಸ್. ವಸತಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕೊಟ್ರೇಶ್(16) ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕರಿಯಮ್ಮನಹಳ್ಳಿ ಗ್ರಾಮದ ನಿವಾಸಿ ಗುರುಲಿಂಗಪ್ಪ ಎಂಬುವವರ ಪುತ್ರ ಕೋಟೇಶ್ ಫೆ.16 ಸೋಮವಾರ ಬೆಳಗ್ಗೆ ಸುಮಾರು 7:14ಕ್ಕೆ ಶಾಲೆಯ 3ನೇ ಮಹಡಿಯಿಂದ ಜಿಗಿದು ಈತ ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಸಂಬAಧ ಭರಮಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನೆಗೆ ಸಂಬAಧಿಸಿದAತೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಆತ್ಮಹತ್ಯ ಸ್ಥಳವನ್ನು ವೀಕ್ಷಿಸಿ, ಶಾಲೆಯ ಮುಖ್ಯಸ್ಥರು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿತು. ಶಾಲೆಯ ಕೊಠಡಿಗಳು, ವಿದ್ಯಾರ್ಥಿಗಳಿಗೆ ನೀಡಿರುವ ಮೂಲಭೂತ ಸೌಕರ್ಯ ಹಾಗೂ ಸಂಸ್ಥೆಯ ಕಡತಗಳು ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಶಾಲಾ ಆಡಳಿತ ಮಂಡಳಿಯಲ್ಲಿ ಕಂಡುಬAದ ಕೆಲವು ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಿಕೊಳ್ಳುವಂತೆ ನ್ಯಾಯಾಧೀಶ ಎಂ.ವಿಜಯ್ ಶಾಲೆಯ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ.ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಹೆಚ್.ಎನ್, ಮಕ್ಕಳ ರಕ್ಷಣಾ ಘಟದ ಉಪಸಮನ್ವಯಾಧಿಕಾರಿ ಹನುಮಂತಪ್ಪ.ಬಿ.ಎA., ಶಿಕ್ಷಣ ಇಲಾಖೆಯ ಸಂಪತ್ ಕುಮಾರ್, ಮೂರ್ತಚಾರ್ ಸೇರಿದಂತೆ ಡಿ.ವಿ.ಎಸ್ ಸಂಸ್ಥೆಯ ಖಜಾಂಚಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.