December 14, 2025
1742475787698.jpg


ಚಿತ್ರದುರ್ಗ  ಮಾರ್ಚ್ 20:
ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆಯಿಂದಾಗಿ ಅತಿ ಹೆಚ್ಚಿನ ಉಷ್ಠಾಂಶ ಇರುವುದರಿಂದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯ ದೈನಂದಿನ ವರದಿಗಳ ಅನುಸಾರ ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಉಷ್ಣತೆಯು ಸರಾಸರಿ 38 ಡಿಗ್ರಿ ಸೆಲ್ಸಿಯಸ್ ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಇದ್ದು, “ಬಿಸಿಗಾಳಿ” ಸಂದರ್ಭಗಳು ಮುಂದುವರೆದಿರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ವಹಿಸಬೇಕಾಗಿರುವ ಎಚ್ಚರಿಕೆ ಕ್ರಮಗಳ ಬಗ್ಗೆ ಮಾದ್ಯಮಗಳ ಮುಖಾಂತರ ಮಾಹಿತಿಯನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಸ್ತುತ ಹೆಚ್ಚು ಉಷ್ಠಾಂಶ ಇರುವುದರಿಂದ ಜನರು ನಿರ್ಜಲೀಕರಣಗೊಂಡು ಅನಾರೋಗ್ಯಕ್ಕೆ ಒಳಗಾಗುವ ಸಂಭವವಿರುವುದರಿಂದ, ನಿಯಮಿತವಾಗಿ ಶುದ್ಧ ಕುಡಿಯುವ ನೀರನ್ನು ಸೇವಿಸಿ ನಿರ್ಜಲೀಕರಣ ಉಂಟಾಗುವುದನ್ನು ತಪ್ಪಿಸಬಹುದಾಗಿರುತ್ತದೆ. ಆದ್ದರಿಂದ ಸರ್ಕಾರಿ ಕಚೇರಿಗಳಿಗೆ ಬರುವಂತಹ ಸಾರ್ವಜನಿಕರಿಗೆ ಅನುಕೂಲವಾಗುವಂತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ತಪ್ಪದೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಲ್ಲಾ ಸರ್ಕಾರಿ ಕಚೇರಿಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಟಿ. ವೆಂಕಟೇಶ್ ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading