ನಾಯಕನಹಟ್ಟಿ ಪಟ್ಟಣದಲ್ಲಿ ರಂಜಾನ್ ಹಬ್ಬದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಪೋಲಿಸ್ ಉಪನಿರೀಕ್ಷಕ ಜಿ. ಪಾಂಡುರಂಗಪ್ಪ ಮಾತನಾಡಿ, ರಂಜಾನ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು. ಮಸೀದಿ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಅನುಸರಿಸಲಿದೆ ಎಂದು ತಿಳಿಸಿದರು.







ಪಥ ಸಂಚಲನದಲ್ಲಿ ಠಾಣೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.