
ಚಳ್ಳಕೆರೆ ಏ20
ಅಂಬೇಡ್ಕರ್ ಒಂದು ಸಮುದಾಯಕ್ಕೆ ಮೀಸಲಾದವರಲ್ಲ. ಅವರು ಭಾರತದ ಸರ್ವ ಜನಾಂಗದ ಮಾಹನಾಯಕ’ ಎಂದು ಶಾಸಕ ಟಿ ರಘುಮೂರ್ತಿ ಹೇಳಿದರು.
ಚಳ್ಳಕೆರೆ ತಾಲೂಕಿನ ಜುಂಜರಗುಂಟೆ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬಾಬಾ ಸಾಹೇಬ್
ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನತೆ ನೀಡಿದ್ದು,
ಇಂದಿನ ದಿನದಲ್ಲಿ ಹಿಂದುಳಿದ ಜನಾಂಗ ಸಮಾಜದಲ್ಲಿ
ಉತ್ತಮ ಸ್ಥಾನ ಪಡೆಯಲು ಸಂವಿಧಾನ ಕಾರಣವಾಗಿದೆ.
ಆದ್ದರಿಂದ ನಾವು ಸಂವಿಧಾನನ್ನು ಸಮರ್ಪಕವಾಗಿ
ಬಳಸಿಕೊಳ್ಳ ಬೇಕಿದೆ ಅ ರೂಂ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗಮಾತ್ರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮುಖಂಡರಾದ ನಿಂಗಪ್ಪ, ಪ್ರದೀಪ್, ವೀರಣ್ಣ, ಶಿವಣ್ಣ,ಇತರರಿದ್ದರು.




About The Author
Discover more from JANADHWANI NEWS
Subscribe to get the latest posts sent to your email.