ಚಿತ್ರದುರ್ಗ:
ಬಾಲ್ಯವಿವಾಹ ತಡೆಗಟ್ಟಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಹೇಳಿದರು.
ನಗರದ ಮುರುಘಾಮಠದಲ್ಲಿ ಆಶ್ರಿತ ಸಂಸ್ಥೆ ವತಿಯಿಂದ ಅಕ್ಷಯ ತೃತೀಯದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬಾಲ್ಯವಿವಾಹ ಜಾಗೃತಿ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕಾನೂನಿನ ಅರಿವು ಕಡಿಮೆ ಇರುವುದರಿಂದ ಕೆಲ ಪೋಷಕರು ಅಪ್ರಾಪ್ತ ಮಕ್ಕಳಿಗೆ ಮದುವೆ ಮಾಡುತ್ತಿರುವ ಘಟನೆಗಳು ಕಂಡು ಬರುತ್ತಿವೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ ಫೀರ್, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಅಧ್ಯಕ್ಷ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮುರುಘಾಮಠದ ಬಸವ ಕುಮಾರ ಸ್ವಾಮೀಜಿ, ಆಶ್ರಿತ ಸಂಸ್ಥೆಯ ಜಿಲ್ಲಾ ಸಂಯೋಜಕ ಡಿ.ಒ. ಮುರಾರ್ಜಿ, ಹರ್ಷವರ್ಧನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುರುಘಾಮಠದ ಆಡಳಿತಾಧಿಕಾರಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.