ಚಿತ್ರದುರ್ಗಮೇ.20:
ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ “ಸುಗಮ್ಯ ಯಾತ್ರಾ” ಅರಿವು ಮೂಡಿಸುವ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಕಟ್ಟಡಗಳು, ಮನೋರಂಜನೆ ಸ್ಥಳಗಳು, ಉದ್ಯಾನಗಳು, ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳು, ಸರ್ಕಾರಿ ಆಸ್ಪತ್ರೆಗಳು, ಗ್ರಂಥಾಲಯಗಳು, ಪ್ರವಾಸಿ ತಾಣಗಳು ಮತ್ತು ಸಾರ್ವಜನಿಕ ಸ್ಥಳಗಳು ಅಡೆ-ತಡೆ ರಹಿತ ವಾತಾವರಣ ಒಳಗೊಂಡಿರುವ ಬಗ್ಗೆ ಮಾಹಿತಿ ಕಲೆಹಾಕಲು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಂಗವಾಗಿ ಇದೇ ಮೇ.21ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.