
ಚಿತ್ರದುರ್ಗಜೂ.20:
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಇದು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಮಹತ್ವ ಗುರುತಿಸಿ, ಪ್ರತಿ ವರ್ಷ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಮಹತ್ವದ ಉಪಕ್ರಮದಲ್ಲಿ ಜಿಲ್ಲೆಯು ಸಕ್ರಿಯವಾಗಿ ಭಾಗವಹಿಸುವುದು ಅತ್ಯಗತ್ಯವಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡು ಯಶಸ್ವಿಗೊಳಿಸಲು ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಜಲ ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಫಲಾನುಭವಿಗಳ ಸಭೆ ಆಯೋಜಿಸುವುದು ಹಾಗೂ ಮಹಾತ್ಮಾಗಾಂಧಿ ನರೇಗಾ ಯೋಜನೆ ಕೂಲಿ ಕಾರ್ಮಿಕರು, ಸಾರ್ವಜನಿಕರು ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.