ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಗುರುವಾರ ಮುಸ್ಲಿಂ ಮುಖಂಡರು ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಡಿವೈಎಸ್ಪಿ ಸತ್ಯನಾರಾಯಣ ಮಾತನಾಡಿ, ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸುವಂತೆ ಮನವಿ ಮಾಡಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಹೇಳಿದರು.
ವೃತ್ತ ನಿರೀಕ್ಷಕ ಕೆ. ಕುಮಾರ್ ಮಾತನಾಡಿ, ಈದ್ ಮಿಲಾದ್ ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶ ಸಾರುವ ಹಬ್ಬವಾಗಿದ್ದು, ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು ಎಂದು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಜಿನಾಮಸೀದಿ ಮುತ್ವಲ್ಲಿ ಎಂ. ದಾದಾಪೀರ್, ಎಸ್.ಪಿ. ಜುಬೇರ್, ಜಾಮಿಯಾ ಮಸೀದಿ ಅಧ್ಯಕ್ಷ ಯಾಕೂಬಲಿ, ಟಿಪ್ಪು ಸುಲ್ತಾನ್ ಅಧ್ಯಕ್ಷ ಪಿ. ಬಶೀರ್ ಹಯಾತ್, ಎಚ್.ಎಸ್. ಸೈಯದ್, ಸಾಧಿಕ್, ಅನ್ವರ್ ಮಾಸ್ಟರ್ ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.