ಚಿತ್ರದುರ್ಗ ಸೆ.20:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಸೆ.23 ಮತ್ತು 24ರಂದು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸೆಪ್ಟೆಂಬರ್ 23ರಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅವರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಮೊಳಕಾಲ್ಮುರು ತಾಲ್ಲೂಕು ಕಚೇರಿ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು. ಪೊಲೀಸ್ ನಿರೀಕ್ಷಕರು-03 ಅವರು ಇದೇ ದಿನದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅಹವಾಲು ಸ್ವೀಕರಿಸುವರು.
ಸೆಪ್ಟೆಂಬರ್ 24ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು-2 ಅವರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು. ಇದೇ ದಿನದಂದು ಪೊಲೀಸ್ ನಿರೀಕ್ಷಕರು-1 ಅವರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಅಹವಾಲು ಅರ್ಜಿ ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ನಿಗದಿತ ನಮೂನೆ 01 ಮತ್ತು 02 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.