December 15, 2025
FB_IMG_1734698817500.jpg


ಚಿತ್ರದುರ್ಗಡಿ.20:
ಜಿಲ್ಲಾಡಳಿತದ ವತಿಯಿಂದ 2025ರ ಜನವರಿ 01 ರಂದು ಜಿಲ್ಲಾ ಕೇಂದ್ರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು 2025ರ ಜನವರಿ 01 ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸರ್ಕಾರದ ಶಿಷ್ಟಾಚಾರ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿಧಿನಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಸಮಾರಂಭದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ಗೀತಗಾಯನ ಏರ್ಪಡಿಸಲಾಗುವುದು ಎಂದರು.
ಅಮರಶಿಲ್ಪಿ ಜಕಣಾಚಾರಿ ಅವರು ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಸಮಾಜದ ಓರ್ವ ಶಿಲ್ಪಿಯನ್ನು ಸನ್ಮಾನಿಸಲು ಜಿಲ್ಲಾಡಳಿತದ ವತಿಯಿಂದ ಅವಕಾಶ ಕಲ್ಪಿಸಬೇಕು ಎಂದು ಸಮಾಜದ ಮುಖಂಡರು ಕೋರಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಉಪವಿಭಾಗಾಧಿಕಾರಿಗಳ ಕಚೇರಿಯ ನರಸಿಂಹಮೂರ್ತಿ, ಜಿಲ್ಲಾ ವಿಶ್ವಕರ್ಮ ಸಮಾಜದ ಕೆ.ಟಿ. ಸುರೇಶಾಚಾರ್, ಸಿ.ಆರ್.ಸುರೇಶ್, ಎ.ಶಂಕರಾಚಾರ್, ಗೋವರ್ಧನ, ಸುರೇಶ್, ಅನಿಲ್, ಮಲ್ಲಿಕಾರ್ಜುನಾಚಾರ್, ನರೇಂದ್ರಚಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading