June 16, 2026


ಚಿತ್ರದುರ್ಗಡಿ.20:
ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯನ್ನು ಕೈಗೊಂಡು ನಮಸ್ತೆ ಪೋರ್ಟಲ್‍ನ ಎಂಎಸ್ ಸರ್ವೇ ಆಪ್‍ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಹಾಗೂ ನಗರ ಪ್ರದೇಶದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸರ್ವೇ ಕಾರ್ಯಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಇರುವುದಿಲ್ಲ ಎಂದು ಜಿಲ್ಲಾಮಟ್ಟದ ಸಮೀಕ್ಷೆ ಸಮಿತಿ ಸಭೆಗೆ ಮಂಡಿಸಲಾಗಿರುತ್ತದೆ. ಅದರಂತೆ ಜಿಲ್ಲೆಯ ಗ್ರಾಮೀಣ ಮತ್ತು ನಗರದ ಪ್ರದೇಶಗಳಲ್ಲಿ ಮ್ಯಾನ್ಯುಯಲ್ ಸ್ಕ್ವಾವೆಂಜರ್‍ಗಳು ಇರುವಿದಲ್ಲ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿರುತ್ತದೆ. ಈ ಕುರಿತು ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಇದೇ ಡಿ.26ರೊಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading