ಚಳ್ಳಕೆರೆ ಸುದ್ದಿ:
ನಗರಂಗೆರೆ ಗ್ರಾಮದ ನಿವಾಸಿ ಗೌರಮ್ಮ ಅವರ ಪತಿ ಬೀದಿ ನಾಯಿಯ ಕಡಿತದಿಂದ ರೇಬಿಸ್ ವೈರಸ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ಗ್ರಾಮದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.
ಈ ದುರ್ಘಟನೆ ಹಿನ್ನೆಲೆಯಲ್ಲಿ ನಗರಂಗೆರೆ ಗ್ರಾಮ ಪಂಚಾಯಿತಿಯ ವತಿಯಿಂದ ಮೃತರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ₹50,000 ಪರಿಹಾರ ಧನವನ್ನು ಮಂಜೂರು ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ, ಪಿಡಿಒ ರಾಮಚಂದ್ರ ಎಂ ಹಾಗೂ ಪಂಚಾಯಿತಿ ಸದಸ್ಯರು ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ಕನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ ಅವರು, ಬೀದಿ ನಾಯಿಗಳ ನಿಯಂತ್ರಣ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
About The Author
Discover more from JANADHWANI NEWS
Subscribe to get the latest posts sent to your email.