ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಶಾಲೆ ಮತ್ತು ಮಕ್ಕಳೊಂದಿಗೆ ಪೋಷಕರುಗಳ ಉತ್ತಮ ಬಾಂಧವ್ಯ ವೃದ್ಧಿಗೆ ಶಾಲೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶ್ರೀ ಬೈರವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ
ಸಿ.ಪಿ.ತ್ರಿವೇಣಿ ಹೇಳಿದರು.

ಅವರು ಪಟ್ಟಣದ ಶ್ರೀ ಭೈರವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರುಗಳಿಗೆ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.
ಶಾಲೆಯಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಉದ್ದೇಶದಿಂದ ಶಾಲೆಗಳಿಗೆ ಆಗಮಿಸುವ ಪೋಷಕರುಗಳಿಗೆ ಶಾಲೆಯಲ್ಲಿನ ಕಾರ್ಯ ಚಟುವಟಿಕೆಗಳು, ಶಿಕ್ಷಕರು ಹಾಗೂ ತಮ್ಮ ಮಕ್ಕಳ ಬಗ್ಗೆ ಅರಿಯಲು ಸಹಕಾರಿಯಾಗುತ್ತದೆ.
ಪೋಷಕರು ಶಾಲೆಗಳಲ್ಲಿ ನಡೆಸುವ ವಿವಿಧ ಮಾದರಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ತಮ್ಮ ಮಕ್ಕಳಿಗೂ ಹೆಚ್ಚಿನ ಉತ್ತೇಜನ ನೀಡಿದಂತಾಗುತ್ತದೆ.
ವಿದ್ಯಾ ಸಂಸ್ಥೆಗಳಲ್ಲಿ ಆಯೋಜಿಸುವ ಯಾವುದೇ ಚಟುವಟಿಕೆ ಅಥವಾ ಸಭೆ ಸಮಾರಂಭಗಳಿಗಾಗಲಿ ಪೋಷಕರುಗಳು ತಪ್ಪದೆ ಹಾಜರಾಗುವ ಮೂಲಕ ತಮ್ಮ ಮಕ್ಕಳು ಶೈಕ್ಷಣಿಕ ಹಾಗೂ ಇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಪರಿಪೂರ್ಣ ವ್ಯಕ್ತಿಗಳಾಗಲು ಸದಾ ಸಹಕಾರ, ಮಾರ್ಗದರ್ಶನ ನೀಡುವುದರ ಮೂಲಕ ಪ್ರೋತ್ಸಾಹಿಸಬೇಕೆಂದರು.
ಶಾಲೆಯಲ್ಲಿ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರು ಹಾಗೂ ಪುರುಷ ಪೋಷಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಲ್ಲರೊಂದಿಗೆ ಸಂಭ್ರಮಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಎಸ್.ಕೆ.ರಮೇಶ್, ಸಂಯೋಜಕಿ ಅರ್ಪಿತಸೇನ್, ತನುಶ್ರೀ, ಮುಖ್ಯ ಶಿಕ್ಷಕಿ ಯಶಸ್ವಿನಿ, ಶಿಕ್ಷಕರಾದ ಮಂಜುನಾಥ್, ಚಾಂದಿನಿ, ರಕ್ಷಿತಾ, ಲಕ್ಷ್ಮಿ, ಅಶ್ವಿನಿ, ಅಫ್ರಿನ್ ತಾಜ್, ಹನಿಫಕೌಸರ್, ಹೀನ ಕೌಸರ್, ಸಾಮಿಯ ಅಂಜುಮ್, ಗೌತಮಿ, ಸಿಬ್ಬಂದಿಗಳು, ಪೋಷಕರುಗಳು, ವಿದ್ಯಾರ್ಥಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.