February 21, 2026
FB_IMG_1771680299656.jpg

ಚಳ್ಳಕೆರೆ: ತಾಲೂಕಿನ ಚೌಳೂರು ಗ್ರಾಮದ ಬ್ಯಾರೇಜ್ ಹಾಗೂ ಕ್ಷೇತ್ರ ವ್ಯಾಪ್ತಿಯ ಇತರ ಬ್ಯಾರೇಜ್‌ಗಳಲ್ಲಿ ಮೀನುಗಾರಿಕೆ ಇಲಾಖೆ ಕರ್ನಾಟಕ ವತಿಯಿಂದ ಉಚಿತ ಮೀನು ಮರಿ ದಾಸ್ತಾನು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಯೋಜನೆಯ ಮೂಲಕ ಸ್ಥಳೀಯ ಮೀನುಗಾರರಿಗೆ ಆರ್ಥಿಕವಾಗಿ ಬಲವರ್ಧನೆ ಸಿಗಲಿದ್ದು, ಜಲ ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಗ್ರಾಮೀಣ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ. ಮೀನುಗಾರಿಕೆ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.
ಕಾರ್ಯಕ್ರಮದಲ್ಲಿ ಮೀನುಗಾರಿಕೆ ಇಲಾಖೆ ತಾಲ್ಲೂಕು ಅಧಿಕಾರಿ ಶ್ರೀಮತಿ ದೀಪಾಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜನಾಯ್ಕ, ತಾಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯ ಪ್ರಕಾಶ್, ಮುಖಂಡರಾದ ತಿಪ್ಪೇಸ್ವಾಮಿ, ಚನ್ನಕೇಶವ, ದೇವರಾಜ್, ನಾಗೇಂದ್ರಪ್ಪ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading