ವರದಿ:ಶಿವಮೂರ್ತಿ ನಾಯಕನಹಟ್ಟಿ.
ನಾಯಕನಹಟ್ಟಿ : ಪಟ್ಟಣದ ಮಯೂರ್ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಎಸ್ ಟಿ ಎಸ್ ಆರ್ ವಿದ್ಯಾ ಸಂಸ್ಥೆ ಪರೀಕ್ಷಾ ಕೇಂದ್ರಗಳಲ್ಲಿ 426 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬರೆದರು.
ಮಯೂರ್ ಇಂಟರ್ನ್ಯಾಷನಲ್ ಸ್ಕೂಲ್ ಕೇಂದ್ರದಲ್ಲಿ 235 ಒಟ್ಟು ವಿದ್ಯಾರ್ಥಿಗಳಲ್ಲಿ 224 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 11 ವಿದ್ಯಾರ್ಥಿಗಳು ಗೈರಾಗಿದ್ದರು. 120 ಬಾಲಕರು, 115 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅಧೀಕ್ಷಕರಾದ ಬಿ ವಿಶ್ವನಾಥ್ ಮಾಹಿತಿ ನೀಡಿದರು.
ಎಸ್ ಟಿ ಎಸ್ ಆರ್ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ 205 ಒಟ್ಟು ವಿದ್ಯಾರ್ಥಿಗಳಲ್ಲಿ 2002 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೂರು ವಿದ್ಯಾರ್ಥಿಗಳು ಗೈರಾಗಿದ್ದರು. 115 ಬಾಲಕರು, 90 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅಧೀಕ್ಷಕರಾದ ರಮೇಶ್ ಕುಮಾರ್ ಮಾಹಿತಿ ನೀಡಿದರು.
About The Author
Discover more from JANADHWANI NEWS
Subscribe to get the latest posts sent to your email.