ನಾಯಕನಹಟ್ಟಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕಿ ಅನ್ನಪೂರ್ಣ ತುಕಾರಾಂ ಅವರು, ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದದಿಂದಲೇ ಜಯ ಸಾಧಿಸಿದ್ದೇನೆ ಎಂದು ಹೇಳಿದರು.
ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, “ನಾನು ದೇವರ ಪರಮ ಭಕ್ತೆ. ನಮ್ಮ ತಂದೆಯವರ ಕಾಲದಿಂದಲೂ ಈ ದೇವರನ್ನು ಆರಾಧಿಸುತ್ತಾ ಬರುತ್ತಿದ್ದೇವೆ. ಬೆಂಗಳೂರಿಗೆ ತೆರಳುವಾಗಲೂ ದೇವರ ಆಶೀರ್ವಾದ ಪಡೆದುಕೊಂಡು ಹೋಗುವುದು ನಮ್ಮ ಕುಟುಂಬದ ಸಂಪ್ರದಾಯವಾಗಿದೆ. ನಮ್ಮ ದೇವರು ಎಂದಿಗೂ ಕೈ ಬಿಡುವುದಿಲ್ಲ, ಹೋಗುವಾಗ-ಬರುವಾಗ ಕಾಪಾಡುತ್ತಾರೆ ಎಂಬ ನಂಬಿಕೆ ನಮ್ಮ ಕುಟುಂಬದಲ್ಲಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಾಲಯಕ್ಕೆ ಅರ್ಧ ಕೆಜಿ ಬೆಳ್ಳಿ ಅರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ನಾಯಕನಹಟ್ಟಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆ.ಆರ್. ರವಿಕುಮಾರ್, ಪಟ್ಟಣ ಪಂಚಾಯತಿ ಸದಸ್ಯ ಓಬಯ್ಯ, ಮೋಟಾರ್ ಅಂಗಡಿ ಪ್ರಕಾಶ್, ಸಂಘದ ಕಾರ್ಯದರ್ಶಿ ಬೋರಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.