June 21, 2026
IMG-20260621-WA0230

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಯಕನಹಟ್ಟಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 3 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿ. ಎಸ್. ಸಿ ಒಲಂಪಿಯಾಡ್ 6.0 ಪರೀಕ್ಷೆ ಬರೆದಿದ್ದ, ವಿಧ್ಯಾರ್ಥಿಗಳಿಗೆ ಭಾನುವಾರ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ನಾಯಕನಹಟ್ಟಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ನೋಂದಾವಣೆ ಮಾಡಿದ್ದ, 615 ವಿದ್ಯಾರ್ಥಿಗಳ ಪೈಕಿ 580 ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಇದರಲ್ಲಿ ಶೇಕಡಾ 80 ರಷ್ಟು ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದು , ಅವರಿಗೆ ಭಾನುವಾರ ರೋಟರಿ ಭವನ ಚಳ್ಳಕೆರೆಯಲ್ಲಿ ಹಮ್ಮಿಕೊಂಡಿದ್ದ, ಸಿ.ಎಸ್.ಸಿ ಸೇವಾದಾರರ ಸಭೆಯಲ್ಲಿ ಜಗಳೂರು ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀಯುತ ಪ್ರವೀಣಕುಮಾರ್ ಸರ್ ಹಾಗೂ ನಾಯಕನಹಟ್ಟಿ ತಾಲ್ಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀಯುತ ಜಯಂತ್ ಸರ್ ಇವರ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿದ ಜಗಳೂರು ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀಯುತ ಪ್ರವೀಣ ಕುಮಾರ್ ಸರ್ ಇವರು ಒಲಂಪಿಯಾಡ್ ಪರೀಕ್ಷೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದು, ಈ ಪರೀಕ್ಷೆಯಲ್ಲಿ ಗಣಿತ, ವಿಜ್ಞಾನ, ಇಂಗ್ಲಿಷ್ ಹಾಗೂ ಸಾಮಾನ್ಯ ಜ್ಞಾನದಂತಹ ವಿಷಯಗಳಲ್ಲಿ ವಿಧ್ಯಾರ್ಥಿಗಳ ಸಾಮಾರ್ಥ್ಯವನ್ನು ಹೆಚ್ಚಿಸುವ ಹಾಗೂ ಕಂಪ್ಯೂಟರ್ ಜ್ಞಾನವನ್ನು ವೃದ್ಧಿಸಲು ಸಹಾಯ ಮಾಡುತ್ತದೆ. ಈ ಪರೀಕ್ಷೆ ಕೇವಲ ಶಾಲಾ ಪಠ್ಯ ಕ್ರಮಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳನ್ನು ಆಳವಾದ ಜ್ಞಾನ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯವನ್ನು ಹೆಚ್ಚಿಸಲು ವಿನ್ಯಾಸಗೊಳಿಸುವ ಪರೀಕ್ಷೆಯಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ನಿರ್ದೇಶಕ ಪ್ರವೀಣ ಕುಮಾರ್ ತಿಳಿಸಿದರು.
ತಾಲ್ಲೂಕಿನ ಮಾನ್ಯ ಯೋಜನಾಧಿಕಾರಿ ಜಯಂತ್ ಸರ್ ಮಾತನಾಡಿ olamapaid ಎಕ್ಸಾಂ ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಉದ್ದೇಶಿಸಿ olamapaid ಒಂದು ಆನಲೈನ್ ಎಕ್ಸಾಂ ಆಗಿದ್ದು, ಮುಂದಿನ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರಿ ಆಗಲಿದ್ದು, ವಿಧ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ, ಹಾಗೂ ಐಚ್ಛಿಕ ವಿಷಯಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಈ olamapaid ಸಹಕಾರಿಯಾಗಲಿದೆ ಎಂದು ತಿಳಿಸಿದರು.*
ಈ ಸಂಧರ್ಭದಲ್ಲಿ ತಾಲ್ಲೂಕಿನ ಹಣಕಾಸು ಪ್ರಬಂಧಕ ಲೋಕೇಶ್, ತಾಲ್ಲೂಕು ನೋಡಲ್ ಅಧಿಕಾರಿ ಪ್ರವೀಣ್, ಆಡಳಿತ ಸಹಾಯಕ ಪ್ರಬಂಧಕ ಭರತ್, ನಗದು ಮೇಲ್ವಿಚಾರಕ ವಿದ್ಯಾಸಾಗರ್ ಹಾಗೂ ತಾಲ್ಲೂಕು ಸಿ.ಎಸ್.ಸಿ ಸೇವಾದಾರರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading