
ಚಿತ್ರದುರ್ಗಜುಲೈ21:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ ಮತ್ತು ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಐದನೇ ಸುತ್ತಿನ ಸೀಟುಗಳನ್ನು ಸೋಮವಾರ ಹಂಚಿಕೆ ಮಾಡಲಾಯಿತು.
ಕ್ರೈಸ್ ವಸತಿ ಶಾಲೆಗಳ ಆಡಳಿತಾಧಿಕಾರಿ ಹಾಗೂ ಚಿತ್ರದುರ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು, ವಿದ್ಯಾರ್ಥಿಗಳಿಗೆ ದಾಖಲಾತಿ ಆದೇಶದೊಂದಿಗೆ ಗುಲಾಬಿ ಹೂವು ನೀಡಿ ಶುಭ ಹಾರೈಸಿದರು.
ಸರ್ಕಾರವು ಎಲ್ಲ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಜಿಲ್ಲಾ ಸಮನ್ವಯಾಧಿಕಾರಿ ಆರ್.ರಮೇಶ್, ತಾಲ್ಲೂಕು ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ, ಮಂಜಣ್ಣ, ದೇವಲ ನಾಯಕ್, ಪ್ರಾಂಶುಪಾಲರಾದ ನಾಗರಾಜ್, ಮಹೇಶ್, ಅಂಗಡಿ ಪ್ರಕಾಶ್, ಮಂಜುನಾಥ್ ರೆಡ್ಡಿ ಸೇರಿದಂತೆ ಇತರರು ಇದ್ದರು.