
ಹಿರಿಯೂರು :
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ತಮ್ಮ ಸಂಘದ ಸದಸ್ಯರಿಗೆ ಆರ್ಥಿಕ ನೆರವು ನೀಡುವ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಹ ನಡೆಸುತ್ತಾ ಬಂದಿದ್ದು, ಇದೀಗ ಆಟೋಟ ಸ್ಪರ್ಧೆಗಳ ಮೂಲಕ ಮನೋರಂಜನೆಯನ್ನು ಸಹ ನೀಡುತ್ತಿದೆ ಎಂಬುದಾಗಿ ಗರೀಬ್ ಷವಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಶಿವಕುಮಾರ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ 25 ಜ್ಞಾನವಿಕಾಸ ಕೇಂದ್ರಗಳ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆಟೋಟ ಸ್ಪರ್ಧೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಜ್ಞಾನವಿಕಾಸ ಕೇಂದ್ರಗಳ ಸದಸ್ಯರಿಗೆ ಆಟೋಟ ಸ್ಪರ್ಧೆ ಯನ್ನು ನಡೆಸುತ್ತಿದ್ದು, ಸದಸ್ಯರು ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಆಟದಲ್ಲಿ ವಿಜೇತರಾಗಬೇಕು ಎಂಬುದಾಗಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಯೋಜನಾಧಿಕಾರಿಗಳಾದ ಹರಿಪ್ರಸಾದ್ ರೈ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ, ನಮ್ಮ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡದಿರುವ ಕಾರ್ಯಗಳಿಲ್ಲ ಎನ್ನುವಷ್ಟರ ಮಟ್ಟಿಗೆ ನಮ್ಮ ಸಂಘವು ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯನ್ನು ವಿಸ್ತರಿಸಿದೆ ಎಂಬುದಾಗಿ ಹೇಳಿದರು.
ಆಟೋಟ ಸ್ಪರ್ಧೆಯಲ್ಲಿ “ಲಕ್ಕಿವಿನ್ನರ್” ಅದೃಷ್ಟದ ಆಟ, ಮ್ಯೂಸಿಕಲ್ ಚೇರ್, ಬಲೂನ್ ಪಾಸಿಂಗ್ ಆಟ, ಹಗ್ಗಜಗ್ಗಾಟ, ಲೆಮೆನ್ ಅಂಡ್ ಸ್ಪೂನ್ ವಿವಿಧ ರೀತಿಯ ಆಟಗಳನ್ನು ಸದಸ್ಯರಿಗೆ ಮಾಡಿಸಲಾಯಿತು
ಈ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮತ್ತು ಮೇಲ್ವಿಚಾರಕರು ಜ್ಞಾನ ವಿಕಾಸ ಸಂಯೋಜಕಿಯರು, ಜ್ಞಾನ ವಿಕಾಸ ಸದಸ್ಯರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.