September 16, 2025
FB_IMG_1732198660072.jpg


ಹಿರಿಯೂರು :
ನಗರದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿದ್ದು, ನಗರದ ಅಭಿವೃದ್ಧಿ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ರಸ್ತೆ ಅಗಲೀಕರಣ ಅನಿವಾರ್ಯವಾಗಿದೆ. ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ಪಟ್ಟಣದಲ್ಲಿ ರಸ್ತೆ ವಿಸ್ತರಣೆಯಿಂದ ವಾಹನಗಳ ಸುಗಮ ಸಂಚಾರ ಅಭಿವೃದ್ಧಿಗೆ ಪೂರಕವಾಗಿದೆ ಎಂಬುದಾಗಿ ಮುಖಂಡರಾದ ಕೆ.ಪಿ.ಶ್ರೀನಿವಾಸ್ ಹೇಳಿದರು.
ನಗರದ ನಗರಸಭೆ ಆವರಣದಲ್ಲಿ ಬುಧವಾರದಂದು ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಹಾಗೂ ಮುಖ್ಯರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಗರದಲ್ಲಿ ಹಾದು ಹೋಗುವ ಈ ರಸ್ತೆ ಅತ್ಯಂತ ಕಿರಿದಾಗಿದ್ದು, ನಿತ್ಯ ಲಾರಿ, ಬಸ್, ಆಟೋ, ದ್ವಿಚಕ್ರ ವಾಹನಗಳ ಸಂಚಾರಕ್ಕೆ ದುಸ್ತರವಾಗಿದ್ದು, ಟ್ರಾಫಿಕ್ ಜಾಮ್ ನಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಾದಾಚಾರಿಗಳಿಗೆ ಕಿರಿಕಿರಿಯಾಗುತ್ತಿದೆ. ನಗರದ ಅಂಬೇಡ್ಕರ್ ವೃತ್ತದಿಂದ ವೇದಾವತಿ ಸೇತುವೆವರೆಗೆ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಕಾಲಮಿತಿಯಲ್ಲಿ ರಸ್ತೆ-ವಿಸ್ತರಣೆ ಮಾಡುವಂತೆ ಅವರು ಒತ್ತಾಯಿಸಿದರು.
ಈ ಪ್ರತಿಭಟನಾ ಸ್ಥಳಕ್ಕೆ ಚಿತ್ರದುರ್ಗ ಉಪವಿಭಾಗಾಧಿಕಾರಿಗಳಾದ ಎ.ಸಿ.ಕಾರ್ತಿಕ್, ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸಿ ಮಾತನಾಡಿ, ಆದಷ್ಟು ಬೇಗ ರಸ್ತೆ ಅಗಲೀಕರಣ ಮಾಡಲು ಎಲ್ಲರೂ ಉತ್ಸುಕರಾಗಿದ್ದಾರೆ, ಆದರೆ ಈ ಮಧ್ಯ ನ್ಯಾಯಾಲಯದಲ್ಲಿ ಒಂದು ಪ್ರಕರಣ ದಾಖಲಾಗಿದ್ದರಿಂದ ಅದಕ್ಕೆ ಸಂಬಂಧಪಟ್ಟ ದಾಖಲಾತಿ ಒದಗಿಸಿ, ಅದನ್ನು ಪರಿಹರಿಸಿಕೊಳ್ಳಲಾಗುವುದಲ್ಲದೆ,
ಈಗಾಗಲೇ ಹೈಕೋರ್ಟ್ ನಲ್ಲಿನ ವಾದ ಮಂಡನೆಗೆ ದಾಖಲಾತಿ ಒದಗಿಸುತ್ತಿದ್ದು,ಶೀಘ್ರನದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಾದಷ್ಟು ಬೇಗ ಈ ರಸ್ತೆ ಅಗಲೀಕರಣ ಮಾಡಲಾಗುವುದು ಎಂಬುದಾಗಿ ಪ್ರತಿಭಟನಾಕಾರರರಿಗೆ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರುಗಳಾದ ಘಾಟ್ ರವಿ, ಓಂಕಾರ್, ಜಗದೀಶ್, ರೈತ ಮುಖಂಡರುಗಳಾದ ಕೆ.ಸಿ.ಹೊರಕೇರಪ್ಪ,ಕೆ.ಟಿ.ತಿಪ್ಪೇಸ್ವಾಮಿ, ಬಿ.ಡಿ.ಎಸ್.ಎಸ್ ಮುಖಂಡರಾದ ತಿಮ್ಮರಾಜು, ಹನುಮಂತರಾಯ, ರಘುನಾಥ್, ಲಕ್ಷ್ಮಿಕಾಂತ್, ಚಂದ್ರಪ್ಪ, ರಾಮದಾಸ್, ಕರ್ಣಕುಮಾರ್, ದಾಸಭೋವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading