
ಹಿರಿಯೂರು:
ತಾಲ್ಲೂಕಿನ ಗೌಡನಹಳ್ಳಿ ಗ್ರಾಮಪಂಚಾಯ್ತಿಯ ಪರಿಶಿಷ್ಟ ಜಾತಿಯ ಮಹಿಳೆಗೆ ಮೀಸಲಾಗಿದ್ದ ಗ್ರಾಮಪಂಚಾಯ್ತಿಯ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪುಟ್ಟನರಸಮ್ಮ ಚಂದ್ರಹಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯಲ್ಲಿ ತಾಲ್ಲೂಕು ತಹಶೀಲ್ದಾರ್ ರಾಜೇಶಕುಮಾರ್ ರವರು ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಸದಸ್ಯರುಗಳಾದ ನಾಗರಾಜ್, ನಾಗಭೂಷಣ್, ಓ.ಟಿ.ಪಿ.ಸ್ವಾಮಿ, ತಿಪ್ಪೇಸ್ವಾಮಿ, ಗಂಗಮ್ಮ, ಪಿ.ಡಿ.ಓ.ರಾಜೇಶ್ವರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.