ನಾಯಕನಹಟ್ಟಿ: ನಾಯಕನಹಟ್ಟಿಯಲ್ಲಿ ಇಂದು ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಚಳ್ಳಕೆರೆ ತಾಲ್ಲೂಕಿನ ದೊಡ್ಡ ಉಳ್ಳಾರ್ತಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಈ ವರ್ಷದ ತಾಲೂಕು ಮಟ್ಟದ ಉತ್ತಮ ಸಂಘ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ, ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಂಘದ ಕಾರ್ಯಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಸಂಘದ ಪ್ರತಿನಿಧಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಈ ಗೌರವವು ದೊಡ್ಡ ಉಳ್ಳಾರ್ತಿ ಗ್ರಾಮದ ಹಾಲು ಉತ್ಪಾದಕರು, ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಸಂತಸ ಮೂಡಿಸಿದ್ದು, ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಪ್ರೇರಣೆಯಾಗಿದೆ.
ತಾಲೂಕು ಮಟ್ಟದಲ್ಲಿ ಉತ್ತಮ ಸಂಘವೆಂಬ ಗೌರವ ದೊರೆತಿರುವುದು ಗ್ರಾಮಕ್ಕೆ ಹೆಮ್ಮೆಯ ಸಂಗತಿಯಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.
