ಚಿತ್ರದುರ್ಗಡಿ.21:
2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಲ್ಲಾ ಅರ್ಹ ಫಲಾನುಭವಿಗಳು ಸಕಾಲದಲ್ಲಿ ಇ-ಕೆವೈಸಿ ನೊಂದಣಿ ಮಾಡಿಸಲು ಕೋರಿದೆ.
ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇ-ಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.