January 29, 2026
n6485729361737534379579119f3868bb4656bc1536abf51441f8baedf5ccd9da3f82c4222c9a729f26370c.jpg

  ಬೆಂಗಳೂರು ಜ.22 ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳಿಗೆ ಬಿಗ್ ಶಾಕ್ ನೀಡಿದೆ. ಅದೇನೆಂದರೇ ಇಲಾಖೆ ವ್ಯಾಪ್ತಿಯ ಇತರೆಡೆ ನಿಯೋಜನೆ, ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಕೂಡಲೇ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ.ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯ ಕರ್ತವ್ಯಕ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ / ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ ಅನ್ನ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ / ಜಿಲ್ಲಾಧಿಕಾರಿಗಳ ಉಪವಿಭಾಗಾಧಿಕಾರಿ/ ತಹಶೀಲ್ದಾರ್ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ ಎಂದಿದ್ದಾರೆ.

ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ದಿಜಟಲೀಕರಣ ಮಾಡುವ ಸಂಬಂಧ ಹಲವು ಜನಪರ ಯೋಜನಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬಗರ್ ಹುಕುಂ / Land Beat App/ ದರಖಾಸ್ತು ಪೋಡಿಯ 1 to 5 ಪ್ರಕರಣಗಳು / Adhar Seeding / ಕಂದಾಯ ಇಲಾಖೆಯ ಕಡತಗಳ ಗಣಕೀಕರಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ರಗಳ ಕೊರತೆಯಿಂದಾಗಿ ಹಾಲಿ ಗ್ರಾಮ ಆಡಳಿತ ಅಧಿಕಾರಿ ಹುದೈಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಹಚ್ಚಿನ ಕಾರ್ಯದೊತ್ತಡ ಉಂಟಾಗುತ್ತಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಆದುದರಿಂದ ಪ್ರಾದೇಶಿಕ ಆಯುಕ್ತರ ಜಿಲ್ಲಾಧಿಕಾರಿಗಳ | ಉಪವಿಭಾಗಾಧಿಕಾರಿ | ತಹಶೀಲ್ದಾರ್ ಕಛೇರಿಗಳಲ್ಲಿ ನಿಯೋಜನೆ / ಅನ್ನ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿರವರುಗಳನ್ನು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಕೈಗೊಂಡಿರುವ ಕ್ರಮದ ಕುರಿತು ದಿನಾಂಕ27.01.205ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗುವುದು. ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಅಖಿಲ ಭಾರತ ಸವಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ಹಾಗೂ ಕರ್ನಾಟಕ ನಾಗರಿಕ ಸವ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ಮತ್ತು ಕರ್ನಾಟಕ ನಾಗರಿಕ ಸವಾ (ನಡತೆ) ನಿಯಮಗಳು 1966 ಗಳಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading