ಹಿರಿಯೂರು :
ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ನೇತೃತ್ವದಲ್ಲಿ ಜನವರಿ 23 ರ ಗುರುವಾರದಂದು ವಾಣಿವಿಲಾಸಸಾಗರ ಜಲಾಶಯಕ್ಕೆ ಭಾಗಿನ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರು ಆಗಮಿಸಲ್ಲಿದ್ದಾರೆ ಎಂಬುದಾಗಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಖಾದಿ ಜೆ.ರಮೇಶ್ ಹೇಳಿದರು.
ನಗರದ ವಾಣಿವಿಲಾಸಸಾಗರ ಜಲಾಶಯಕ್ಕೆ ಜನವರಿ 23 ರಂದು ನಡೆಯಲಿರುವ ಭಾಗಿನ ಅರ್ಪಿಸುವ ಕಾರ್ಯಕ್ರಮದ ಕುರಿತಂತೆ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯ ಎಲ್ಲಾ ಹಾಲಿ ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಆಗಮಿಸಲ್ಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಭರ್ಜರಿ ತಯಾರಿಯನ್ನು ನಡೆಸಲಾಗಿದೆ. ಈ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಸುಮಾರು 15 ರಿಂದ 20 ಸಾವಿರ ಜನರು ಬರುವ ನಿರೀಕ್ಷೆಯಿದೆ. ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹಾಗೂ ಪಟ್ಟಣದ ಎಲ್ಲಾ ವಾರ್ಡ್ ಗಳಿಗೆ ವಾಹನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಸ್ತೆ ಉದ್ದಕ್ಕೂ ಬಂಟಿಂಗ್ಸ್ ಅಳವಡಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಆದ್ದರಿಂದ ಐತಿಹಾಸಿಕ ಕಾರ್ಯಕ್ರಮಕ್ಕೆ ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲಾ ವರ್ಗದ ಜನರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ರೈತಾಪಿವರ್ಗದವರು, ವರ್ತಕರು, ಜನಸಾಮಾನ್ಯರು, ಯುವಕ-ಯುವತಿಯರು, ಕಾಲೇಜು ವಿದ್ಯಾರ್ಥಿಗಳು, ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಭಾಗಿನ ಅರ್ಪಿಸಿ ಗಂಗಾ ಪೂಜೆಯಲ್ಲಿ ಪಾಲ್ಗೊಂಡು ಹೋಲಿಗೆ ಊಟ ಸವಿದು ಕಾರ್ಯಕ್ರಮಕ್ಕೆ ಸಾಕ್ಷಿಕರಿಸಬೇಕೆಂದು ತಮ್ಮಲ್ಲಿ ವಿನಂತಿಸುತ್ತೇವೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ನಗರಸಭಾ ಅಧ್ಯಕ್ಷರಾದ ಅಜಯ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಮಾಜಿ ಜಿ.ಪಂ.ಸದಸ್ಯರಾದ ನಾಗೇಂದ್ರನಾಯ್ಕ, ಕಂದಿಕೆರೆ ಸುರೇಶ್ ಬಾಬು, ಗಿಡ್ಡೋಬನಹಳ್ಳಿ ಅಶೋಕ್, ವಿ.ವಿ.ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅತಾವುಲ್ಲಾ, ಕಾರ್ ಮೂರ್ತಿ, ನವೀದ್, ಎಸ್.ಸಿ ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ, ವಕೀಲರಾದ ನಾಗರಾಜ್ ಮಾಳಗೊಂಡನಹಳ್ಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಣ್ಣೇಶ್, ನಾಮ ನಿರ್ದೇಶಿತ ಸದಸ್ಯರಾದ ಶಿವಕುಮಾರ್ ವಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಗುರುಪ್ರಸಾದ್, ದರ್ಶನ್, ಶಾಹೀದ್, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.