March 16, 2026
IMG-20260122-WA0197.jpg

ಬೆಂಗಳೂರು:
ಮಾರ್ಚ್‌ನಲ್ಲಿ ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ. ಖಂಡ್ರೆ, ಹಾಗೂ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಸಮ್ಮೇಳನಕ್ಕೆ ಅಧಿಕೃತ ಆಹ್ವಾನ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ. ಮದನಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಸಮ್ಮೇಳನದ ಲಾಂಛನವನ್ನು ಮತ್ತೊಮ್ಮೆ ಬಿಡುಗಡೆ ಮಾಡಿ, ಬೀದರ್ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಸಿದ್ದೂಪಾಟೀಲ್ ಅವರ ಸಮ್ಮುಖದಲ್ಲಿ ರಾಜ್ಯ ಸಂಘಕ್ಕೆ ಹಸ್ತಾಂತರಿಸಿದರು.
ಎರಡು ದಶಕಗಳ ಬಳಿಕ ಬೀದರ್‌ನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಸಾರ್ಥಕವಾಗಿಸಲು ಎಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಜಿಲ್ಲಾ ಅಧ್ಯಕ್ಷ ಆನಂದ್ ದೇವಪ್ಪ, ದೀಪಕ್ ವಾಲಿ, ಮಾಳಪ್ಪ ಅಡಸಾರೆ, ಸಿದ್ರಾಮಯ್ಯ ಸ್ವಾಮಿ, ಪೃಥ್ವಿರಾಜ್, ಬಸವರಾಜ ಪವಾರ್, ವಿಜಯಕುಮಾರ ಅಷ್ಟುರೆ ಸೇರಿದಂತೆ ಹಲವರು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading