February 22, 2026

ಹೊಸದುರ್ಗ: ಪ್ರಸಕ್ತ ಸಾಲಿನ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಪಿ.ಯು. ಕಾಲೇಜು ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.ಪರೀಕ್ಷೆಯಲ್ಲಿ ರೋಹಿತ್ ಪಂಡಿತ್ ಜಿ.ಎಸ್ (86.36), ಕೆ. ಸುಜ್ಞಾನಚಾರ್ (82.77), ಸಯ್ಯದಾ ಜಾಹ್ರಾ (82.22), ಸ್ಪೂರ್ತಿ ಪಿ.ಟಿ (79.17), ವಿಲಾಸ್ ಆರ್. ಯಾದವ್ (78.31) ಹಾಗೂ ಸಾಗರ್ ಎಂ (71.23) ಉತ್ತಮ ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಸಹಕಾರವೇ ಈ ಯಶಸ್ಸಿಗೆ ಕಾರಣವೆಂದು ಸಂಸ್ಥೆ ತಿಳಿಸಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading