
ಚಿತ್ರದುರ್ಗಮೇ.22:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಚಿತ್ರದುರ್ಗ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ಕಲ್ಯಾಣ ಇಲಾಖೆ ತಾಲ್ಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.