ಹೊಸದುರ್ಗ, : ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಎಸ್ ಲಿಂಗಮೂರ್ತಿ ಅವರ ಜನ್ಮದಿನದ ಅಂಗವಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಶುಭಾಶಯಗಳನ್ನು ಕೋರಿದರು.
ನಗರದ ಬಸವೇಶ್ವರ ಸರ್ಕಲ್ ನಡೆದ ಜನ್ಮದಿನದ ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ಎಸ್ ಲಿಂಗಮೂರ್ತಿ ಮಾತನಾಡಿ, ಜನರ ಪ್ರೀತಿ ಮತ್ತು ವಿಶ್ವಾಸವೇ ತಮ್ಮ ಸಾರ್ವಜನಿಕ ಜೀವನದ ದೊಡ್ಡ ಶಕ್ತಿಯಾಗಿದೆ.
ತಾಲೂಕಿನ ಅಭಿವೃದ್ಧಿ, ರೈತರ ಸಮಸ್ಯೆಗಳ ಪರಿಹಾರ, ಕುಡಿಯುವ ನೀರು, ರಸ್ತೆ, ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಲಿಂಗಮೂರ್ತಿ ಅವರು, ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತೇನೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಶೀರ್ವಾದದಿಂದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ರವರ ಮಾರ್ಗದರ್ಶನದಲ್ಲಿ ಬಿಜೆಪಿ ಪಕ್ಷವನ್ನ ಸಾಕಷ್ಟು ಬಲಪಡಿಸಿ ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಮಾಡುತ್ತೇವೆ..ನಮ್ಮ ಕಾರ್ಯಕರ್ತರು ಮತ್ತು ಅಭಿಮಾನಿಗಳು ನನ್ನ ಮೇಲಿ ಪ್ರೀತಿ,ವಿಶ್ವಾಸ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.ಇದು ನನಗೆ ಮತ್ತಷ್ಟು ಶಕ್ತಿ, ಉತ್ಸಾಹ ಮತ್ತು ಜವಾಬ್ದಾರಿಯನ್ನು ನೀಡಿದೆ. ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಸಮರ್ಪಣೆಯಿಂದ ಕೆಲಸ ಮಾಡಲು ಈ ಪ್ರೋತ್ಸಾಹ ನನಗೆ ಸ್ಪೂರ್ತಿಯಾಗಿದೆ”.
ಕ್ಷೇತ್ರದ ಜನರ ಕಷ್ಟದಲ್ಲಿ ಸದಾ ಭಾಗಿಯಾಗಿ ಸಾರ್ವಜನಿಕರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು.ಜನರ ಆಶೀರ್ವಾದ ಮತ್ತು ಸಹಕಾರವೇ ತಮ್ಮ ರಾಜಕೀಯ ಹಾಗೂ ಸಾಮಾಜಿಕ ಬದುಕಿನ ಅಡಿಪಾಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಲಿಂಗಮೂರ್ತಿ ಅವರು ಯಾವುದೇ ಹುದ್ದೆ ಇದ್ದರೂ ಇಲ್ಲದಿದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಂಡಿದ್ದಾರೆ. ಅಭಿವೃದ್ಧಿ ಮತ್ತು ಜನಸೇವೆಯ ಮೂಲಕ ತಾಲೂಕಿನ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ ಎಂದು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಅನೇಕ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಲಿಂಗಮೂರ್ತಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಅವರ ಮುಂದಿನ ಸಾರ್ವಜನಿಕ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಆರ್ ಡಿ ಸೀತಾರಾಮ್ ರಾವ್,ಮಂಡಲ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಕಾರ್ಯದರ್ಶಿ ನಾಗರಾಜ್ ಚಿತ್ತಪ್ಪ, ಪನ್ನಗ ರಾಯ್ಕರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಕೀಲ ರವಿಕುಮಾರ್, ಕುಮಾರ್ ಜ್ಞಾನೇಶ್ ರಾಘವೇಂದ್ರ ಹರ್ಷ, ನಾಗತಿಹಳ್ಳಿ ಹನುಮಂತಪ್ಪ ಸುರೇಶ್ ಗುರುಮೂರ್ತಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊಂಡಾಪುರ ಮಂಜುನಾಥ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.